ಆ್ಯಪ್ನಗರ

ವೇತನ ವಿಳಂಬ, ಸಿಬ್ಬಂದಿಗಳಿಂದ ಕಿರುಕುಳ: ಆರೋಪ

ಸ್ಥಳೀಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಡಿ ಗ್ರೂಪ್‌ ನೌಕರನೊಬ್ಬ ತಮಗೆ ಇಲಾಖೆ ಸಿಬ್ಬಂದಿಗಳಿಂದ ಕಿರುಕುಳ ಹಾಗೂ 7 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಕಚೇರಿ ಮುಂದೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿರುವ ಪ್ರಕರಣ ಸಂತೇಮರಹಳ್ಳಿಯಲ್ಲಿ ಶನಿವಾರ ನಡೆದಿದೆ.

Vijaya Karnataka 28 Oct 2018, 5:00 am
ಸಂತೇಮರಹಳ್ಳಿ : ಸ್ಥಳೀಯ ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಡಿ ಗ್ರೂಪ್‌ ನೌಕರನೊಬ್ಬ ತಮಗೆ ಇಲಾಖೆ ಸಿಬ್ಬಂದಿಗಳಿಂದ ಕಿರುಕುಳ ಹಾಗೂ 7 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಕಚೇರಿ ಮುಂದೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿರುವ ಪ್ರಕರಣ ಸಂತೇಮರಹಳ್ಳಿಯಲ್ಲಿ ಶನಿವಾರ ನಡೆದಿದೆ.
Vijaya Karnataka Web wage delays harassment by staff accused
ವೇತನ ವಿಳಂಬ, ಸಿಬ್ಬಂದಿಗಳಿಂದ ಕಿರುಕುಳ: ಆರೋಪ


ಡಿ.ಗ್ರೂಫ್‌ ನೌಕರ ರಾಜಶೇಖರ ಎಂಬುವವವರೇ ಆತ್ಮಹತ್ಯೆಗೆ ಯತ್ನಿಸಿದವರು. ಶನಿವಾರ ಬೆಳಗ್ಗೆ ಕಚೇರಿ ಆವರಣದಲ್ಲೇ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಮೈಮೇಲೆ ಸಿಮೇಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಕಂಡು ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ.

ಈ ಸಂದರ್ಭ ರಾಜಶೇಖರ ಮಾತನಾಡಿ, ಶಿಶು ಅಭಿವೃದ್ಧಿ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ 5 ವರ್ಷಗಳಿಂದ ನಾನು ಕೆಲಸ ನಿರ್ವಹಿಸುತ್ತಿದ್ದು. ಕಳೆದ 7 ತಿಂಗಳಿಂದ ವೇತನ ನೀಡಿಲ್ಲ. ಇದರ ಜತೆಗೆ ಸಿಬ್ಬಂದಿಗಳು ತಮಗೆ ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದಾರೆ, ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ಜಯಶೀಲಾ ಅವರ ಬಳಿ ತಮ್ಮ ಅಳಲು ತೋಡಿಕೊಂಡರು.

ನೌಕರನ ಮನವಿಗೆ ಪ್ರತಿಕ್ರಿಯಿಸಿದ ಜಯಶೀಲಾ ಅವರು, ಕೂಡಲೇ ಈ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ, ಕೂಡಲೇ ಈಗ ಬಿಡುಗಡೆಯಾಗಿರುವ 2 ತಿಂಗಳ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ