ಆ್ಯಪ್ನಗರ

ಮಗುವಿನ ಜತೆ ಮನೆ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ

ಮಾನಸಿಕವಾಗಿ ಅಸ್ವಸ್ತರಾಗಿದ್ದ ತಿರುಪತಿ ಎಂಬ ವ್ಯಕ್ತಿ, ನಾಲ್ಕು ವರ್ಷದ ಪುತ್ರಿಯ ಜತೆ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನೈನ ಮಧಾವರಂನಲ್ಲಿ ಘಟನೆ ನಡೆದಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

TNN 25 Feb 2020, 2:15 pm
ಚೆನ್ನೈ: ಮಾನಸಿಕವಾಗಿ ಅಸ್ವಸ್ಥವಾಗಿದ್ದ 35 ವರ್ಷದ ವ್ಯಕ್ತಿ, ತನ್ನ 4 ವರ್ಷದ ಪುತ್ರಿಯ ಜತೆ 2ನೇ ಮಹಡಿಯಲ್ಲಿದ್ದ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯನ್ನು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Vijaya Karnataka Web sucide


ಮಧಾವರಮ್‌ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ತಿರುಪತಿ ರೆಡ್ಡಿ ಮಾನಸಿಕವಾಗಿ ನೊಂದಿದ್ದ. ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲ್ಕು ಅಂತಸ್ಥಿನ ಅಪಾರ್ಟ್‌ಮೆಂಟ್‌ನ ತನ್ನ ಮಗು ಟಿ. ಹಾರಿಕಾಳನ್ನು ಹಿಡಿದು ಬಾಲ್ಕನಿಂದ ಜಿಗಿದಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನೂ ತಕ್ಷಣ ಖಾಸಗಿ ಆಸ್ಪತ್ರೆಗೆ ಸ್ಥಳೀಯರು ಒಯ್ದಿದ್ದಾರೆ. ಆದರೆ ಇಬ್ಬರೂ ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ಘೋಷಿಸಿದ್ದಾರೆ.

ಮಾಧವರಂ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ದೇಹಗಳನ್ನು ಸ್ಟಾನ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಭಾನುವಾರ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಕೆಲವರು ತಿರುಪತಿ ರೆಡ್ಡಿ ಮಗುವಿನೊಂದಿಗೆ ಬಾಲ್ಕನಿಗೆ ಬಂದಿದ್ದನ್ನು ನೋಡಿದ್ದಾರೆ. ಆದರೆ ಈ ಬಗ್ಗೆ ಆಲೋಚನೆ ಮಾಡುವ ಮೊದಲೇ ತಿರುಪತಿ ಕೆಳಕ್ಕೆ ಜಿಗಿದ್ದಿದ್ದಾರೆ. ಕ್ಷಣಾರ್ಧದಲ್ಲಿ ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಪೊಲೀಸರು ಪ್ರತ್ಯಕ್ಷದರ್ಶಿಳು ನೀಡಿದ ವಿವರವನ್ನು ಸುದ್ದಿಗಾರರೊಂದಿಗೆ ವಿವರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯಾವುದೇ ಸುಸೈಡ್‌ ನೋಟ್‌ ಸಿಲ್ಲಿಲ್ಲ. ತಿರುಪತಿ ರೆಡ್ಡಿ ಕಳೆದ ಕೆಲವಾರು ತಿಂಗಳಿನಿಂದ ಮಾನಸಿಕವಾಗಿ ಅಸ್ವಸ್ಥರಾಗಿದ್ದರು. ಇದಕ್ಕಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಅವರು ಕ್ಯಾಶಿಯರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕೆಲ ತಿಂಗಳಿನಿಂದ ಅವರು ಸರಿಯಾಗಿ ಕೆಲಸಕ್ಕೆ ಹಾಜರಾಗುತ್ತಿರಲಿಲ್ಲ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ. ತಿರುಪತಿ ರೆಡ್ಡಿ 5 ವರ್ಷದ ಪುತ್ರ, ಪತ್ನಿಯನ್ನು ಅಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ