ಆ್ಯಪ್ನಗರ

ವಿಕೆ ಶಶಿಕಲಾ ಮತ್ತೆ ಎಐಎಡಿಎಂಕೆಗೆ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ - ಪಳನಿಸ್ವಾಮಿ ಸ್ಪಷ್ಟನೆ

ಶಶಿಕಲಾ ಮತ್ತೆ ಎಐಎಡಿಎಂಕೆಗೆ ಸೇರ್ಪಡೆಯಾಗಲು ಅವಕಾಶವಿಲ್ಲ. ಶೇ. 100 ರಷ್ಟು ಆಕೆಗೆ ಪಕ್ಷಕ್ಕೆ ಪ್ರವೇಶ ನೀಡಲಾಗುವುದಿಲ್ಲ. ಇದನ್ನು ಸ್ಪಷ್ಟವಾಗಿ ನಿರ್ಧರಿಸಿದ ನಂತರವೇ ಎಐಎಡಿಎಂಕೆ ಈಗ ಕಾರ್ಯನಿರ್ವಹಿಸುತ್ತಿದೆ ಎಂದು ಎಡಪ್ಪಾಡಿ ಕೆ ಪಳನಿಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Agencies 19 Jan 2021, 9:19 pm
ಚೆನ್ನೈ: ದಿವಂಗತ ಜೆ ಜಯಲಲಿತಾ ಆಪ್ತೆ ವಿಕೆ ಶಶಿಕಲಾ ಮತ್ತೆ ಎಐಎಡಿಎಂಕೆ ಸೇರ್ಪಡೆಯಾಗುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
Vijaya Karnataka Web Sasikala


ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಹಿಂದೆ ಜೈಲು ಪಾಲಾಗಿರುವ ವಿಕೆ ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು 10 ಕೋಟಿ ರೂ. ದಂಡ ಪಾವತಿಸಿದ ನಂತರ ಮುಂದಿನ ವಾರ ಬಿಡುಗಡೆಯಾಗುವ ಸಾಧ್ಯತೆ ಇದೆ.

"ಶಶಿಕಲಾ ಮತ್ತೆ ಎಐಎಡಿಎಂಕೆಗೆ ಸೇರ್ಪಡೆಯಾಗಲು ಅವಕಾಶವಿಲ್ಲ. ಆಕೆ ಪಕ್ಷದಲ್ಲಿ ಇಲ್ಲವೇ ಇಲ್ಲ. ಶೇ. 100 ರಷ್ಟು ಆಕೆಗೆ ಪ್ರವೇಶ ನೀಡಲಾಗುವುದಿಲ್ಲ. ಇದನ್ನು ಸ್ಪಷ್ಟವಾಗಿ ನಿರ್ಧರಿಸಿದ ನಂತರವೇ ಎಐಎಡಿಎಂಕೆ ಈಗ ಕಾರ್ಯನಿರ್ವಹಿಸುತ್ತಿದೆ. ಈ ಬಗ್ಗೆ ಬೇರೆ ಅಭಿಪ್ರಾಯವಿಲ್ಲ," ಎಂದು ಪಳನಿಸ್ವಾಮಿ ದಿಲ್ಲಿಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ರಾಜ್ಯದ ಉನ್ನತ ನಾಯಕಿ ಜಯಲಲಿತಾ ಅವರ ಸ್ಮಾರಕವನ್ನು ಜನವರಿ 27 ರಂದು ಉದ್ಘಾಟಿಸುವುದಾಗಿ ಅವರು ಹೇಳಿದ್ದು, ಅದೇ ದಿನ ಶಶಿಕಲಾ ಜೈಲಿನಿಂದ ಹೊರಬರುವ ನಿರೀಕ್ಷೆ ದಿನ.

ಮುಂದಿನ ವರ್ಷ ತಮಿಳುನಾಡು ರಾಜಕೀಯಕ್ಕೆ ಶಶಿಕಲಾ ಎಂಟ್ರಿ, ಏರುಪೇರಾಗುವುದೇ ತಮಿಳು ರಾಜಕಾರಣ?
ಶಶಿಕಲಾ ಮತ್ತು ಟಿಟಿವಿ ದಿನಕರನ್‌ ಅವರ 'ಎಎಂಎಂಕೆ' ಪಕ್ಷದ ಜತೆ ಎಐಎಡಿಎಂಕೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದು ಬಿಜೆಪಿ ಅಪೇಕ್ಷೆ ಎನ್ನಲಾಗಿದೆ. ಆದರೆ ಇದಕ್ಕೆ ಎಐಎಡಿಎಂಕೆ ವಿರೋಧ ವ್ಯಕ್ತಪಡಿಸಿದೆ.

ಒಂದೊಮ್ಮೆ ಎಎಂಎಂಕೆ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಮತ ವಿಭಜನೆಯಾಗಿ ಡಿಎಂಕೆಗೆ ಲಾಭವಾಗಬಹುದು ಎಂಬುದು ಬಿಜೆಪಿಯ ಆತಂಕವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಟಿಟಿವಿ ದಿನಕರನ್‌ ಪಕ್ಷ ಶೇ.5ರಷ್ಟು ಮತಗಳನ್ನು ಪಡೆದುಕೊಂಡಿತ್ತು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿಯೂ ಇದೇ ರೀತಿ ಎಎಂಎಂಕೆ ಪ್ರತ್ಯೇಕವಾಗಿ ಸ್ಪರ್ಧಿಸಿದಲ್ಲಿ ಹಲವು ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಇದು ಪುನರಾವರ್ತನೆಯಾದಲ್ಲಿ ಡಿಎಂಕೆಗೆ ಭಾರಿ ಲಾಭವಾಗಲಿದೆ. ಹೀಗಾಗಿ ಶಶಿಕಲಾ ಬಿಡುಗಡೆಯ ಬಳಿಕ ನಡೆಯಲಿರುವ ರಾಜಕೀಯ ಬೆಳವಣಿಗೆಗಳು ಭಾರಿ ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ