ಆ್ಯಪ್ನಗರ

ಜನವರಿ 27ರಂದು ವಿಕೆ ಶಶಿಕಲಾ ಬೆಂಗಳೂರು ಜೈಲಿನಿಂದ ಬಿಡುಗಡೆ

ಜೈಲು ಶಿಕ್ಷೆ ಪೂರ್ಣಗೊಳ್ಳುವುದರ ಜತೆಗೆ, 10 ಕೋಟಿ ರೂಪಾಯಿ ದಂಡ ಪಾವತಿಸಿರುವ ಹಿನ್ನೆಲೆಯಲ್ಲಿ ಜ. 27ರಂದು ಬೆಳಗ್ಗೆ ಶಶಿಕಲಾ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಜೈಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಶಶಿಕಲಾ ಪರ ವಕೀಲ ರಾಜ ಸೆಂತೂರ್‌ ಪಾಂಡಿಯನ್‌ ತಿಳಿಸಿದ್ದಾರೆ.

Agencies 19 Jan 2021, 11:20 pm
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ವಿಕೆ ಶಶಿಕಲಾ ಜನವರಿ 27ರಂದು ಬಿಡುಗಡೆಯಾಗಲಿದ್ದಾರೆ.
Vijaya Karnataka Web sasikala


ಜೈಲು ಶಿಕ್ಷೆ ಪೂರ್ಣಗೊಳ್ಳುವುದರ ಜತೆಗೆ, 10 ಕೋಟಿ ರೂ. ದಂಡ ಪಾವತಿಸಿರುವ ಹಿನ್ನೆಲೆಯಲ್ಲಿ ಜನವರಿ 27ರಂದು ಬೆಳಗ್ಗೆ ಶಶಿಕಲಾ ಅವರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಬಗ್ಗೆ ಜೈಲಿನ ಅಧಿಕಾರಿಗಳಿಂದ ತಮಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಶಶಿಕಲಾ ಪರ ವಕೀಲ ರಾಜ ಸೆಂತೂರ್‌ ಪಾಂಡಿಯನ್‌ ತಿಳಿಸಿದ್ದಾರೆ.

ವಿಕೆ ಶಶಿಕಲಾ ಮತ್ತೆ ಎಐಎಡಿಎಂಕೆಗೆ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ - ಪಳನಿಸ್ವಾಮಿ ಸ್ಪಷ್ಟನೆ
ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ 2017ರ ಫೆಬ್ರವರಿ ತಿಂಗಳಲ್ಲಿ ಶಶಿಕಲಾ, ಇಳವರಸಿ ಮತ್ತು ಸುಧಾಕರನ್‌ಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಇದಾದ ಬಳಿಕ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆಗೂ ಮುನ್ನ ಶಶಿಕಲಾ ಜೈಲಿನಿಂದ ಬಿಡುಗಡೆಯಾಗುತ್ತಿದ್ದು, ಅಲ್ಲಿನ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಅವರ ಆಗಮನದ ಬಳಿಕ ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿವೆ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ