ಆ್ಯಪ್ನಗರ

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಅರೋಪ: ಪ್ರತಿಭಟನೆ

ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಒಂಬತ್ತು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ ಎಂದು ಆರೋಪಿಸಿ ಪೋಷಕರು ಆಸ್ಪತ್ರೆ ಎದುರು ಬುಧವಾರ ರಾತ್ರಿ ಪ್ರತಿಭಟಿಸಿದರು.

ವಿಕ ಸುದ್ದಿಲೋಕ 31 Mar 2016, 5:10 am
ಚಿಕ್ಕಬಳ್ಳಾಪುರ: ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಒಂಬತ್ತು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ ಎಂದು ಆರೋಪಿಸಿ ಪೋಷಕರು ಆಸ್ಪತ್ರೆ ಎದುರು ಬುಧವಾರ ರಾತ್ರಿ ಪ್ರತಿಭಟಿಸಿದರು.
Vijaya Karnataka Web
ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಅರೋಪ: ಪ್ರತಿಭಟನೆ


ಚಿಕ್ಕಬಳ್ಳಾಪುರದ ಪ್ರಶಾಂತನಗರದ ನರಸಿಂಹಮೂರ್ತಿ, ನಾಗಲಕ್ಷ್ಮೀ ದಂಪತಿಯ ಪುತ್ರಿಯಾದ ಕೀರ್ತನಾ ಮೃತ ಮಗು.

ಮಗು ಕೆಲದಿನಗಳಿಂದ ಕೆಮ್ಮು, ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಎಂಟನೇ ವಾರ್ಡಿನ ಜಿ.ಎಸ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ವೈದ್ಯರು ನೀಡಿದ ಚಿಕಿತ್ಸೆ ಬಳಿಕ ಮಗು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿ ಆಸ್ಪತ್ರೆಯ ಪೀಠೋಪಕರಣ ಧ್ವಂಸಗೊಳಿಸಿ ಪ್ರತಿಭಟಿಸಿದ್ದಾರೆ.

ಸರಕಾರಿ ಆಸ್ಪತ್ರೆಯ ವೈದ್ಯರು ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರಿಂದಲೇ ಈ ಪ್ರಮಾದವಾಗಿದೆ ಎಂದು ಪೋಷಕರು ದೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಆಸ್ಪತ್ರೆಗೆ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ