ಆ್ಯಪ್ನಗರ

ಮತ ಜಾಗೃತಿಗೆ ಬೈಕ್‌ ರಾರ‍ಯಲಿ ಹೊರಟ ಸಿಇಒ

ರಾರ‍ಯಲಿಗೆ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಗುರುದತ್‌ ಹೆಗಡೆ ಚಾಲನೆ | ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ, ಬಿತ್ತಿಪತ್ರ ನೀಡಿ ಮತದಾರರಿಗೆ ಅರಿವು ವಿಕ ಸುದ್ದಿಲೋಕ ...

Vijaya Karnataka 11 Apr 2019, 5:00 am
ರಾರ‍ಯಲಿಗೆ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಗುರುದತ್‌ ಹೆಗಡೆ ಚಾಲನೆ | ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ, ಬಿತ್ತಿಪತ್ರ ನೀಡಿ ಮತದಾರರಿಗೆ ಅರಿವು
Vijaya Karnataka Web
ಮತ ಜಾಗೃತಿಗೆ ಬೈಕ್‌ ರಾರ‍ಯಲಿ ಹೊರಟ ಸಿಇಒ


ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮತದಾನ ಹೆಚ್ಚಳ ಮಾಡುವ ಉದ್ದೇಶದಿಂದ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಾನಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಬುಧವಾರ ನಗರದಲ್ಲಿ ಬೃಹತ್‌ ಬೈಕ್‌ ರಾರ‍ಯಲಿ ನಡೆಸಲಾಯಿತು.

ಚಿಕ್ಕಬಳ್ಳಾಪುರ ತಾಲ್ಲೂಕು ಸಮಿತಿ ವತಿಯಿಂದ ಆಯೋಜಿಸಿದ್ದ ಬೈಕ್‌ ರಾರ‍ಯಲಿಗೆ ಚಾಲನೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್‌ ಹೆಗಡೆ ಅವರು ಬೈಕ್‌ ಓಡಿಸುವ ಮೂಲಕ ಚಾಲನೆ ನೀಡಿದರು.

ನಗರದ ಗೌರಿಬಿದನೂರು ರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆರಂಭಗೊಂಡ ಬೈಕ್‌ ರಾರ‍ಯಲಿ, ಎಂಜಿ ರಸ್ತೆ, ಹಳೆ ಎಸ್ಪಿ ಕಚೇರಿ ವೃತ್ತ, ಅಂಬೇಡ್ಕರ್‌ ಭವನ, ಶಿಡ್ಲಘಟ್ಟ ರಸ್ತೆ, ಬಿಬಿ ರಸ್ತೆ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ರಾರ‍ಯಲಿಯಲ್ಲಿ ಪಾಲ್ಗೊಂಡ ಅಧಿಕಾರಿ ಸಿಬ್ಬಂದಿಗಳು ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚುವ ಮೂಲಕ ಅರಿವು ಮೂಡಿಸಿದರು. ನಂತರ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಮಾವೇಶಗೊಂಡು ಅಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಗುರುದತ್‌ ಹೆಗಡೆ, ಲೋಕಸಭಾ ಚುನಾವಣೆಯು ದೇಶವನ್ನು ಪ್ರತಿನಿಧಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಚುನಾವಣೆಯಾಗಿದೆ. ಹಾಗಾಗಿ ಮತದಾರರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಸೂಕ್ತ ಅಭ್ಯರ್ಥಿಗೆ ಮತ ನೀಡಬೇಕು. ಅದರಲ್ಲೂ ಯುವಕರು ಭವ್ಯ ಭಾರತದ ದೇಶವನ್ನು ಮುನ್ನಡೆಸುವ ಪ್ರಜೆಗಳು. ಆದ್ದರಿಂದ ತಮ್ಮ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ದೇಶದ ಭವಿಷ್ಯ ಉತ್ತಮ ರೀತಿಯಲ್ಲಿ ರೂಪಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 18 ವರ್ಷ ತುಂಬಿದ ಎಲ್ಲಾ ಮತದಾರರು ಮತದಾನದ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್‌ ಇ.ಒ ಸಂಜೀವಪ್ಪ, ಸ್ವೀಪ್‌ ಸಮಿತಿಯ ಸದಸ್ಯ ಮುನಿರಾಜು ಸೇರಿದಂತೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ