ಆ್ಯಪ್ನಗರ

ಕಿಸಾನ್‌ ಸಮ್ಮಾನ್‌ ಅವಧಿ ವಿಸ್ತರಣೆ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ರೈತರು ಅರ್ಜಿ ಸಲ್ಲಿಸಲು ಜು. 10ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಹಸೀಲ್ದಾರ್‌ ಎಚ್‌.ಶ್ರೀನಿವಾಸ್‌ ತಿಳಿಸಿದ್ದಾರೆ.

Vijaya Karnataka 3 Jul 2019, 4:21 pm
ಗೌರಿಬಿದನೂರು: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ರೈತರು ಅರ್ಜಿ ಸಲ್ಲಿಸಲು ಜು. 10ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಹಸೀಲ್ದಾರ್‌ ಎಚ್‌.ಶ್ರೀನಿವಾಸ್‌ ತಿಳಿಸಿದ್ದಾರೆ.
Vijaya Karnataka Web
ಕಿಸಾನ್‌ ಸಮ್ಮಾನ್‌ ಅವಧಿ ವಿಸ್ತರಣೆ


ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರೈತರಿಗೆ ನೀಡಿರುವ ಮಹತ್ವಾಕಾಂಕ್ಷೆಯ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಜೂನ್‌ ಕೊನೆ ದಿನದವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತ್ತು. ಆದರೆ ರೈತರ ಹಿತದೃಷ್ಟಿಯಿಂದ ಅದನ್ನು ಜು. 10ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ 34 ಸಾವಿರಕ್ಕೂ ಅಧಿಕ ರೈತರಿದ್ದು, ಈವರೆಗೆ ಯೋಜನೆಗೆ ತಂತ್ರಾಂಶದಲ್ಲಿರುವ ಪ್ರಕಾರ 27,321 ರೈತರು ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆ ಮಾಹಿತಿಯನ್ನು ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದ್ದಿ ವರ್ಗದವರು ರೈತರಿಗೆ ಮಾಹಿತಿ ಒದಗಿಸಬೇಕಿದೆ ಎಂದು ಹೇಳಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಎನ್‌.ಮಂಜುನಾಥ್‌ ಮಾತನಾಡಿ, ಈ ಯೋಜನೆಗೆ ಅರ್ಜಿ ಸಲ್ಲಿಸಿರುವ ರೈತರು ಸ್ವಯಂ ದೃಢೀಕರಣ ಪತ್ರ , ಪಹಣಿ, ಆಧಾರ್‌ ಕಾರ್ಡ್‌ ನಕಲು, ಬ್ಯಾಂಕ್‌ ಖಾತೆ ಪುಸ್ತಕದ ನಕಲುನ್ನು ಅರ್ಜಿ ನಮೂನೆಯೊಂದಿಗೆ ತಾಲೂಕು ಆಡಳಿತ ಕೇಂದ್ರಗಳಾದ ರೈತ ಸಂಪರ್ಕ ಕೇಂದ್ರ, ಅಟಲ್‌ಜೀ ಜನಸ್ನೇಹಿ ಕೇಂದ್ರ, ಗ್ರಾಪಂ, ಹಾಗೂ ಗ್ರಾಮಲೆಕ್ಕಿಗರ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್‌, ತಾಪಂ ವ್ಯವಸ್ಥಾಪಕ ಚಿನ್ನಪ್ಪ, ಕಸಬಾ ಹೋಬಳಿ ರಾಜಸ್ವ ನಿರೀಕ್ಷ ಕ ರವಿಕುಮಾರ್‌, ಗ್ರಾಮ ಲೆಕ್ಕಾಧಿಕಾರಿಗಳಾದ ಮಂಜುನಾಥ್‌, ಖಾದರ್‌ ಮುಂತಾದ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ