ಆ್ಯಪ್ನಗರ

ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಗಂಭೀರವಾಗಿ ಪರಿಗಣಿಸಿ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಿ, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಎಚ್ಚರಿಕೆಯಿಂದ ಮುನ್ನೆಡೆಯಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಾಧಿಕಾರಿ ಡಾ.ಅನಿಲ್‌ಕುಮಾರ್‌ ತಿಳಿಸಿದರು.

Vijaya Karnataka 15 Aug 2019, 5:00 am
ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಕಾರ್ಯಾಗಾರದಲ್ಲಿ ಡಾ.ಅನಿಲ್‌ಕುಮಾರ್‌ ಸಲಹೆ
Vijaya Karnataka Web
ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಗಂಭೀರವಾಗಿ ಪರಿಗಣಿಸಿ


ವಿಕ ಸುದ್ದಿಲೋಕ ಚಿಕ್ಕಬಳ್ಳಾಪುರ


ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಿ, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಎಚ್ಚರಿಕೆಯಿಂದ ಮುನ್ನೆಡೆಯಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಾಧಿಕಾರಿ ಡಾ.ಅನಿಲ್‌ಕುಮಾರ್‌ ತಿಳಿಸಿದರು.

ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಬುಧವಾರ ಆಯೋಜಿಸಿದ್ದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಹೆಣ್ಣು ಭ್ರೂಣ ಹತ್ಯೆಯ ಕಾರಣದಿಂದ ನಮ್ಮ ದೇಶದಲ್ಲಿ 1000 ಪುರುಷರಿಗೆ 920 ಮಹಿಳೆಯರಿದ್ದರೆ, ಕರ್ನಾಟಕದಲ್ಲಿ 1000 ಪುರುಷರಿಗೆ 940 ಮಹಿಳೆಯರಿದ್ದಾರೆ. ಈ ಅಸಮಾನತೆಯ ಲಿಂಗಾನುಪಾತವನ್ನು ಹೋಗಲಾಡಿಸಬೇಕು. ಈ ಕುರಿತು ಕೇಂದ್ರ/ರಾಜ್ಯ ಸರಕಾರಗಳು ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಗಂಭೀರವಾಗಿ ಪರಿಗಣಿಸಿವೆ. ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಈ ಕಾರ್ಯಾಗಾರದಲ್ಲಿ ನೀಡುವ ತರಬೇತಿಯನ್ನು ಉಪಯೋಗಿಸಕೊಳ್ಳಬೇಕು ಎಂದರು.

ಈ ಸಂಬಂಧ ಕೇಂದ್ರ ತನಿಖಾ ತಂಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ನೇರವಾಗಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸುತ್ತದೆ. ನಂತರ ವೈದ್ಯರು ಮತ್ತು ಸಿಬ್ಬಂದಿ ವರ್ಗದವರ ಬಳಿ ಬಂದು ದಾಖಲೆಗಳನ್ನು ಪಡೆದು ಸಾರ್ವಜನಿಕರ ಮತ್ತು ಸಿಬ್ಬಂದಿಯ ದಾಖಲೆಗಳನ್ನು ಪರಿಶೀಲಿಸಿ ಅನುಮೋದನೆ ನೀಡುತ್ತಾರೆ ಎಂದು ಹೇಳಿದರು. ಪ್ರತಿ ದಿನ ಲಿಂಗಾನುಪಾತದ ವ್ಯತ್ಯಾಸಗಳನ್ನು ಗಮನಿಸುವುದು. ಪ್ರತಿಯೊಂದು ದಾಖಲೆಗಳನ್ನು ಅಂತರ್ಜಾಲದಲ್ಲಿ ದಾಖಲಿಸುವುದು. ದಾಖಲಾದ ದಾಖಲಾತಿಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದು. ಕಚೇರಿಯ ದಾಖಲೆಗಳಿಗೂ ಮತ್ತು ಅಂತರ್ಜಾಲದಲ್ಲಿ ದಾಖಲಿಸಿರುವ ದಾಖಲೆಗಳಿಗೂ ವ್ಯತ್ಯಾಸ ಬರದಂತೆ ನೋಡಿಕೊಳ್ಳುವುದು ವೈದ್ಯರ ಹಾಗೂ ಸಿಬ್ಬಂದಿಯ ಕರ್ತವ್ಯ ಎಂದು ಅವರು ತಿಳಿಸಿದರು.

ಈಗಾಗಲೇ ರಾಜ್ಯದ ವಿವಿಧ ಕಡೆಗಳಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಸ್ಕ್ಯಾ‌ನಿಂಗ್‌ ಸೆಂಟರ್‌ಗಳನ್ನು ಮುಚ್ಚಿಸಿ ಸಂಬಂಧಪಟ್ಟ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಸಾರ್ವಜನಿಕರಲ್ಲಿ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ವಸತಿ ವೈದ್ಯಕೀಯ ಅಧಿಕಾರಿ ಡಾ.ರಮೇಶ್‌ ಕುಮಾರ್‌, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಎಂ. ವೆಂಕಟಾಚಲಪತಿ, ಕಾನೂನು ಸಲಹೆಗಾರ ಸುಧಾಕರ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ