ಆ್ಯಪ್ನಗರ

11 ಕೇಂದ್ರಗಳಲ್ಲಿ ಸಿಇಟಿ ಸುಸೂತ್ರ

ವೈದ್ಯ, ದಂತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು.

Vijaya Karnataka 30 Apr 2019, 5:00 am
ಇಂದು ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ
Vijaya Karnataka Web 11
11 ಕೇಂದ್ರಗಳಲ್ಲಿ ಸಿಇಟಿ ಸುಸೂತ್ರ

ಚಿಕ್ಕಬಳ್ಳಾಪುರ:
ವೈದ್ಯ, ದಂತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು.

ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನವಾದ ಸೋಮವಾರ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಸಂಬಂಧಪಟ್ಟಂತೆ ನಡೆದ ಪರೀಕ್ಷೆಯಲ್ಲಿ ಜಿಲ್ಲೆಯ 6 ತಾಲೂಕುಗಳಿಂದ ನೊಂದಾಯಿಸಿಕೊಂಡಿದ್ದ ಒಟ್ಟು 4,368 ವಿದ್ಯಾರ್ಥಿಗಳ ಪೈಕಿ ಬೆಳಗ್ಗೆ ನಡೆದ ಜೀವಶಾಸ್ತ್ರ ಪರೀಕ್ಷೆಗೆ 3846 ಮಂದಿ ಹಾಜರಾಗಿದ್ದು, 522 ಮಂದಿ ಗೈರಾಗಿದ್ದಾರೆ. ಇನ್ನು ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಗೆ 4,100 ಮಂದಿ ಹಾಜರಾಗಿದ್ದು, 268 ಮಂದಿ ಗೈರಾಗಿದ್ದರು.

ನಗರದ ಪಂಚಗಿರಿ ಪದವಿ ಪೂರ್ವ ಕಾಲೇಜು, ಅಗಲಗುರ್ಕಿಯ ಬಿಜಿಎಸ್‌ ಆಂಗ್ಲಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜು, ಸೆಂಟ್‌ ಜೋಸೆಫ್‌ ಪದವಿ ಪೂರ್ವ ಕಾಲೇಜು, ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು, ಶಾಂತಿನಿಕೇತನ ಪದವಿ ಪೂರ್ವ ಕಾಲೇಜು, ನಗರದ ಹೊರ ವಲಯದ ಕೃಷ್ಣಾ ರುಕ್ಮಿಣಿ ಪದವಿ ಪೂರ್ವ ಕಾಲೇಜು, ಅಗಲಗುರ್ಕಿಯ ಎಸ್‌ಬಿಜಿಎಸ್‌ಎನ್‌ ಪದವಿ ಪೂರ್ವ ಕಾಲೇಜು, ನ್ಯೂಟನ್‌ ಇಂಟಿಗ್ರೇಟೆಡ್‌ ಕಾಲೇಜು, ಡಾ. ಶ್ರೀ ಜಚನಿ ಪದವಿ ಪೂರ್ವ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಪರೀಕ್ಷಾ ಸಮಯದಲ್ಲಿ ಅಭ್ಯರ್ಥಿಗಳಿಗೆ ಕೇಂದ್ರದೊಳಗೆ ಕೈಗಡಿಯಾರ, ಕ್ಯಲ್ಕುಲೇಟರ್‌, ಲಾಗ್‌ ಟೇಬಲ್ಸ್‌, ಮೊಬೈಲ್‌ ಪೋನ್‌ ಹಾಗೂ ಇತರೆ ವಿದ್ಯುನ್ಮಾನ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿತ್ತು. ಪ್ರತಿ ಪರೀಕ್ಷಾ ಕೇಂದ್ರದಿಂದ 200 ಮೀಟರ್‌ ವ್ಯಾಪ್ತಿಯೊಳಗೆ 144 ಸೆಕ್ಷ ನ್‌ ಜಾರಿ ಮಾಡಲಾಗಿತ್ತು.

ಇಂದು ಭೌತಶಾಸ್ತ್ರ,ರಸಾಯನಶಾಸ್ತ್ರ ಪರೀಕ್ಷೆ
ಮಂಗಳವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ ಬೆಳಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಇಂದೂ ಕೂಡ ನಗರದ 11 ಪರೀಕ್ಷಾ ಕೇಂದ್ರಗಳ ಸುತ್ತ (ಪರೀಕ್ಷಾ ಸಮಯದಲ್ಲಿ)ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಡಿಡಿಪಿಯು ಎಸ್‌.ಜನಾರ್ಧನ್‌ ತಿಳಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ