ಆ್ಯಪ್ನಗರ

ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನ ಪರಿಚ್ಛೇದ 370 ಹಾಗೂ 35(ಎ) ರದ್ದುಗೊಳಿಸಿದ ಹಿನ್ನೆಲೆಯಲ್ಲಿ ನಗರದ ಎಂ.ಜಿ.ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

Vijaya Karnataka 6 Aug 2019, 3:37 pm
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು
Vijaya Karnataka Web CBP-5GBD-6

ಗೌರಿಬಿದನೂರು:
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನ ಪರಿಚ್ಛೇದ 370 ಹಾಗೂ 35(ಎ) ರದ್ದುಗೊಳಿಸಿದ ಹಿನ್ನೆಲೆಯಲ್ಲಿ ನಗರದ ಎಂ.ಜಿ.ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಎನ್‌.ಎಂ.ರವಿನಾರಾಯಣ ರೆಡ್ಡಿ ಮಾತನಾಡಿ, ಮೋದಿ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯದಿಂದ ಕಣಿವೆ ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಜಯಣ್ಣ, ಗೋಪಿನಾಥ್‌, ಎಸ್‌.ರಮೇಶ್‌, ಮುನಿಲಕ್ಷ ್ಮಮ್ಮ, ಶೋಭಾ, ಲಕ್ಷ್ಮಿ, ಮಾರ್ಕೆಟ್‌ ಮೋಹನ್‌, ಮುರಳಿ, ರಮೇಶ್‌ ರಾವ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ