ಆ್ಯಪ್ನಗರ

​ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು ನಿರೀಕ್ಷಿತ ಎಂದ ಮೊಯಿಲಿ

ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು ನಿರೀಕ್ಷಿತ ಎಂದು ಕಾಂಗ್ರೆಸ್ ಪಕ್ಷದ ನಾಯಕ ವೀರಪ್ಪ ಮೊಯಿಲಿ ಹೇಳಿದ್ದಾರೆ.

Vijaya Karnataka Web 4 Mar 2018, 5:26 pm
ಚಿಕ್ಕಬಳ್ಳಾಪುರ: ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು ನಿರೀಕ್ಷಿತ ಎಂದು ಕಾಂಗ್ರೆಸ್ ಪಕ್ಷದ ನಾಯಕ ವೀರಪ್ಪ ಮೊಯಿಲಿ ಹೇಳಿದ್ದಾರೆ.
Vijaya Karnataka Web congress defeat in north east expected
​ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು ನಿರೀಕ್ಷಿತ ಎಂದ ಮೊಯಿಲಿ


ಮಾಧ್ಯಮಗಳೊಂದಿಗೆ ಮಾತನಾಡಿದ ಮೊಯಿಲಿ, ನಾಗಾಲ್ಯಾಂಡ್ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವನ್ನು ನಿರೀಕ್ಷಿಸಿರಲಿಲ್ಲ, ಅಂತೆಯೇ ಮೇಘಾಲಯದಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಬಹುಮತ ಸಾಧಿಸಿದೆ ಎಂದರು.

ಈ ಫಲಿತಾಂಶ ಕರ್ನಾಟಕ ರಾಜ್ಯದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬದಲಾಗಿ ಅಲ್ಲಿನ ಪರಿಸ್ಥಿತಿಯೇ ಬೇರೆ , ಕರ್ನಾಟಕದ ಪರಿಸ್ಥಿತಿಯೇ ಬೇರೆ ಅಂತ ಸಮರ್ಥನೆ ಮಾಡಿಕೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸರಕಾರದ ಸಾಧನೆಗಳಿಂದ ಕಾಂಗ್ರೆಸ್ 150 ಸ್ಥಾನಗಳನ್ನ ಗಳಿಸುವುದರ ಮೂಲಕ ಮತ್ತೆ ರಾಜ್ಯದಲ್ಲಿ ಅಧಿಕಾರ ನಡೆಸಲಿದೆ, ಆದ್ರೆ ಬಿಜೆಪಿ ಈಗಿನ ಸ್ಥಾನಗಳನ್ನ ಸಹ ಕಳೆದುಕೊಳ್ಳಲಿದೆ ಅಂತ ಭವಿಷ್ಯ ನುಡಿದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ