ಆ್ಯಪ್ನಗರ

ದಿನೇಶ್ ಗುಂಡೂರಾವ್ ಅಧ್ಯಕ್ಷರಾದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಯಿತು: ಅನರ್ಹ ಶಾಸಕ ಸುಧಾಕರ್

ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ ಈಗ ಅನರ್ಹಗೊಂಡಿರುವ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ ಸುಧಾಕರ್‌ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Vijaya Karnataka Web 19 Oct 2019, 2:52 pm
ಚಿಕ್ಕಬಳ್ಳಾಪುರ: ರಾಜ್ಯದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ ಗುಂಡೂರಾವ್ ನೇಮಕವಾದ ಬಳಿಕವೇ ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಯಿತು ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.
Vijaya Karnataka Web ಡಾ ಕೆ ಸುಧಾಕರ್‌
ಡಾ ಕೆ ಸುಧಾಕರ್‌


ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಸತ್ತು ಹೋಗಿದೆ. ನೆರೆ ಪರಿಹಾರ ತರುವಲ್ಲಿ ವಿಫಲವಾಗಿದೆಯೆಂಬ ದಿನೇಶ್ ಗುಂಡೂರಾವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆಯೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಗತಿ ಬಂದಿದೆ ಎಂದರು.

ಯಾವುದೇ ಸರಕಾರವನ್ನು ಎರಡು ತಿಂಗಳಲ್ಲಿ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಐದು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯಲ್ಲಿ 127 ಇದ್ದ ಶಾಸಕರ ಸಂಖ್ಯೆ ಈಗ 79 ಕ್ಕೆ ಬಂದಿದೆ. ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಕೇವಲ 1 ಸ್ಥಾನ ಬಂದಿದೆ ಎಂದರು.

ದಿನೇಶ್ ಗುಂಡೂರಾವ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಅಧ್ಯಕ್ಷರಾಗಿ ಹೇಗೆ ಇರಬೇಕು. ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ತಿಳದುಕೊಳ್ಳಲಿ. ಅವರಿಂದಲೇ ಪಕ್ಷ ರಾಜ್ಯದಲ್ಲಿ ಆಧೋಗತಿಗೆ ಇಳಿಯಿತು ಎಂದು ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕತೆ ದಿನೇಶ್ ಗುಂಡೂರಾವ್ ಅವರಿಗೆ ಇಲ್ಲ. ಸಿಎಂ ಬಿ.ಎಸ್. ಯಡಿಯೂರಪ್ಪ ನೇತ್ರತ್ವದಲ್ಲಿ ಬಿಜೆಪಿ ಸರಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಡಾ ಸುಧಾಕರ್ ಸರ್ಟಿಫಿಕೇಟ್‌ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ