ಆ್ಯಪ್ನಗರ

ಪಂಚಾಯಿತಿ ಕಚೇರಿಯಲ್ಲಿಯೇ ನೌಕರ ನೇಣಿಗೆ ಶರುಣು

ತಾಲೂಕಿನ ಕಸಬಾ ಹೋಬಳಿಯ ಆನೂನು ಗ್ರಾಮದ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರೇವಣ್ಣ ಕುಮಾರ್‌ ಎನ್ನುವವರು ಸರಾರದಿಂದ ಸೇವಾ ಭದ್ರತೆಗಾಗಿ ವಿಧಾನಸೌಧದ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಡೀ ರಾಜ್ಯಾದ್ಯಂತ ಸದ್ದು ಮಾಡಿದ್ದ ಬೆನ್ನಲ್ಲೇ, ತಾಲೂಕಿನ ಕೈವಾರ ಹೋಬಳಿಯ ಹಿರೇಕಟ್ಟಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಿನಗೂಲಿ ನೌಕರನೊಬ್ಬ ಗ್ರಾಪಂ ಕಚೇರಿಯಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.

Vijaya Karnataka 26 Jun 2019, 3:57 pm
ಚಿಂತಾಮಣಿ: ತಾಲೂಕಿನ ಕಸಬಾ ಹೋಬಳಿಯ ಆನೂನು ಗ್ರಾಮದ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರೇವಣ್ಣ ಕುಮಾರ್‌ ಎನ್ನುವವರು ಸರಾರದಿಂದ ಸೇವಾ ಭದ್ರತೆಗಾಗಿ ವಿಧಾನಸೌಧದ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಡೀ ರಾಜ್ಯಾದ್ಯಂತ ಸದ್ದು ಮಾಡಿದ್ದ ಬೆನ್ನಲ್ಲೇ, ತಾಲೂಕಿನ ಕೈವಾರ ಹೋಬಳಿಯ ಹಿರೇಕಟ್ಟಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಿನಗೂಲಿ ನೌಕರನೊಬ್ಬ ಗ್ರಾಪಂ ಕಚೇರಿಯಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.
Vijaya Karnataka Web employee suicide in panchayat office
ಪಂಚಾಯಿತಿ ಕಚೇರಿಯಲ್ಲಿಯೇ ನೌಕರ ನೇಣಿಗೆ ಶರುಣು


ಹಿರೇಕಟ್ಟಿಗೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ರಾಮಕೃಷ್ಣಪ್ಪ (48) ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಹಿರೇಕಟ್ಟಿಗೇನಹಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯನ್ನು ಗ್ರಾಪಂ ಕಚೇರಿಯಲ್ಲಿಯೇ ಹಮ್ಮಿಕೊಂಡಿದ್ದರು. ಗ್ರಾಮಸಭೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರತರಾಗಿದ್ದ ವೇಳೆ, ರಾಮಕೃಷ್ಣಪ್ಪ ಗ್ರಾಪಂ ಕಚೇರಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಮೃತ ರಾಮಕೃಷ್ಣಪ್ಪನಿಗೆ ಕಳೆದ ಆರು ತಿಂಗಳ ಹಿಂದೆ ಕೆಲಸ ಖಾಯಂ ಆಗಿತ್ತು ಎನ್ನಲಾಗಿದೆ. ಮದ್ಯದ ದಾಸನಾಗಿದ್ದ ರಾಮಕೃಷ್ಣಪ್ಪ ಈ ಹಿಂದೆಯೂ ಅತ್ಮಹತ್ಯೆಗೆ ಯತ್ನಿಸಿದ್ದು, ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ.

ರಾಮಕೃಷ್ಣಪ್ಪ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಷಯ ತಿಳಿದು ಅಧಿಕಾರಿಗಳು ಕಚೇರಿಯೊಳಗೆ ಹೋಗುವ ವೇಳೆಗೆ ರಾಮಕೃಷ್ಣಪ್ಪ ಅವರು ಅಸು ನೀಗಿದ್ದರು. ಕೂಡಲೇ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಪಿಡಿಓ ಶೈಲಜಾ, ಮತ್ತು ಪಂಚಾಯಿತಿಯ ಸಿಬ್ಬಂದಿ ಚಿಂತಾಮಣಿ ಗ್ರಾಮಾಂತರ ಪೊಲೀಸರಿಗೆ ವಿಷಯ ಮುಟ್ಟಿಸಿದರು. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಹಾಗೂ ತಹಸಿಲ್ದಾರ್‌ ಎಸ್‌.ಎಲ್‌.ವಿಶ್ವನಾಥ್‌ ಭೇಟಿ ನೀಡಿ ಸ್ಥಳ ಪರಿಶಿಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ