ಆ್ಯಪ್ನಗರ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ: ಶಾಸಕ ವಿ.ಮುನಿಯಪ್ಪ

ಉತ್ತಮ ಸಮಾಜ ನಿರ್ಮಾಣದಲ್ಲಿ ಎಲ್ಲರ ಆರೋಗ್ಯ ಮಟ್ಟ ಸುಧಾರಣೆಯು ಅತಿ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆದ ಶಾಸಕ ವಿ.ಮುನಿಯಪ್ಪ ತಿಳಿಸಿದರು.

Vijaya Karnataka 11 Mar 2019, 5:00 am
ಶಿಡ್ಲಘಟ್ಟ: ಉತ್ತಮ ಸಮಾಜ ನಿರ್ಮಾಣದಲ್ಲಿ ಎಲ್ಲರ ಆರೋಗ್ಯ ಮಟ್ಟ ಸುಧಾರಣೆಯು ಅತಿ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆದ ಶಾಸಕ ವಿ.ಮುನಿಯಪ್ಪ ತಿಳಿಸಿದರು.
Vijaya Karnataka Web everyone needs cooperation for building a healthy society mla v muniyappa
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ: ಶಾಸಕ ವಿ.ಮುನಿಯಪ್ಪ


ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಮೊದಲನೇ ಸುತ್ತಿನ ರಾಷ್ಟ್ರೀಯ ಪಲ್ಸ್‌ ಪæäೕಲಿಯೋ ಲಸಿಕೆ ಕಾರ್ಯಕ್ರಮದಲ್ಲಲ್ಲಿ ಮಗುವೊಂದಕ್ಕೆ ಹನಿ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಹುಟ್ಟಿದ ಮಗುವಿನಿಂದ 15 ವರ್ಷದೊಳಗಿನ ಯಾವ ವಯಸಿನಲ್ಲಾದರೂ ಪೊಲಿಯೋ ಬರುವ ಸಾಧ್ಯತೆ ಇದೆ. ಹಾಗಾಗಿ ಹುಟ್ಟಿದ ಮಗುವಿನಿಂದ ಹಿಡಿದು 5 ವರ್ಷ ವಯೋಮಾದನ ಎಲ್ಲರಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದರು. ಆ ಮೂಲಕ ನಮ್ಮ ಮಕ್ಕಳನ್ನು ಪೊಲಿಯೋದಿಂದ ದೂರ ಇಟ್ಟು ಆರೋಗ್ಯವಂತ ಮಕ್ಕಳನ್ನಾಗಿ ಬೆಳೆಸಿ ಈ ಸಮಾಜಕ್ಕೆ ಕೊಡುಗೆಯಾಗಿ ನೀಡಿ ಸದೃಡ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಮನವಿ ಮಾಡಿದರು.

ಕೇಂದ್ರ ಸರಕಾರದ ಈ ಪಲ್ಸ್‌ ಪæäೕಲಿಯೋ ಅಭಿಯಾನ ಕೇವಲ ಅಧಿಕಾರಿಗಳಿಂದ ಮಾತ್ರ ಸಾಧ್ಯವಾಗದು, ಸಮಾಜದ ಎಲ್ಲರೂ ಕæೖ ಜೋಡಿಸಿದಾಗ ಮಾತ್ರ ಅಭಿಯಾನ ಯಶಸ್ಸಾಗಲು ಸಾಧ್ಯ ಎಂದು ಕೋರಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ಕುಮಾರ್‌ ಮಾತನಾಡಿ, ತಾಲೂಕಿನಾದ್ಯಂತ 106 ಕೇಂದ್ರಗಳನ್ನು ತೆರೆದಿದ್ದು, ಪ್ರತಿ ಕೇಂದ್ರದಲ್ಲೂ ನಾಲ್ಕು ಮಂದಿ ಸಿಬ್ಬಂದಿಯನ್ನು ನೇಮಿಸಲಾಗಿದೆ. ನಗರದಲ್ಲಿ 26 ಕೇಂದ್ರಗಳನ್ನು ತೆರೆಯಲಾಗಿದೆ.

ನಗರದಲ್ಲಿ 6,945 ಹಾಗೂ ಗ್ರಾಮೀಣ ಭಾಗದಲ್ಲಿ 15 ಸಾವಿರ ಮಕ್ಕಳಿಗೆ ಪæäೕಲಿಯೋ ಹನಿ ಹಾಕುವ ಗುರಿ ಇದೆ. ನಗರದಲ್ಲಿ 4 ದಿನಗಳ ಕಾಲ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 3 ದಿನಗಳ ಕಾಲ ಅಭಿಯಾನ ನಡೆಯಲಿದೆ.

ಬಸ್‌, ರೈಲು ನಿಲ್ದಾಣದಲ್ಲಿ ವಿಶೇಷವಾಗಿ ಪæäೕಲಿಯೋ ಹನಿ ಹಾಕುವ ಕೇಂದ್ರಗಳನ್ನು ತೆರೆದಿದ್ದು ಯಾರೊಬ್ಬರೂ ಕæೖ ತಪ್ಪಿ ಹೋಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ನಗರಸಭೆ ಅಧ್ಯಕ್ಷ ಅಪ್ಸರ್‌ ಪಾಷಾ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವæೖದ್ಯಾಧಿಕಾರಿ ಡಾ.ವಾಣಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಪ್ರಕಾಶ್‌, ಡಾ.ತಿಮ್ಮೇಗೌಡ, ನಗರಸಭೆ ಪೌರಾಯುಕ್ತ ಜಿ.ಎನ್‌.ಚಲಪತಿ ಇನ್ನಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ