ಆ್ಯಪ್ನಗರ

HD Kumaraswamy: ಬೊಮ್ಮಾಯಿ ಹೆಬ್ಬೆಟ್ಟಿನ ಸಿಎಂ, ದಿಲ್ಲಿ ನಾಯಕರ ಮುಂದೆ ಕೈಕಟ್ಟಿ ನಿಲ್ಲುತ್ತಾರೆ: ಎಚ್‌ಡಿ ಕುಮಾರಸ್ವಾಮಿ

ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದೆ. ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಗೋಡಂಬಿ, ಬಾದಾಮಿ‌ ಕೊಟ್ಟು ಕಳುಹಿಸೋಕೆ ಸರ್ವಪಕ್ಷ ಸಭೆಯನ್ನು ಯಾಕೆ ಕರೆಯುತ್ತೀರಿ. ಎರಡೂ ಕಡೆ ನಿಮ್ಮದೆ ಸರ್ಕಾರ ಇದೆ, ಅಲ್ಲಿ ಮಾತನಾಡಿಕೊಳ್ಳಿ. ಬೆಳಗಾವಿ ಮಹಾರಾಷ್ಟ್ರದಲ್ಲಿ ಇದ್ದರೇನು, ಕರ್ನಾಟಕದಲ್ಲಿ ಇದ್ದರೇನು.‌ ನಾವೆಲ್ಲರೂ ಭಾರತೀಯರು ಎನ್ನುತ್ತೀರಾ ಅಲ್ವೇ ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.

Edited byಅವಿನಾಶ ವಗರನಾಳ | Vijaya Karnataka Web 26 Nov 2022, 12:27 pm

ಹೈಲೈಟ್ಸ್‌:


  • ಬೆಳಗಾವಿ ಗಡಿ ವಿವಾದದ ಹಿಂದೆ ಬಿಜೆಪಿ ಇರುವ ಶಂಕೆ ಎಂದ ಎಚ್‌ಡಿ ಕುಮಾರಸ್ವಾಮಿ
  • ಬಿಜೆಪಿ ಸರ್ಕಾರ ಬಂದಾಗ ಗಡಿ ವಿವಾದವೂ ಮುನ್ನೆಲೆಗೆ ಬರುತ್ತೆ ಎಂದು ಆರೋಪ
  • ಬೊಮ್ಮಾಯಿ ಹೆಬ್ಬೆಟ್ಟಿನ ಸಿಎಂ, ದಿಲ್ಲಿ ನಾಯಕರ ಮುಂದೆ ಕೈಕಟ್ಟಿ ನಿಲ್ಲುತ್ತಾರೆ ಎಂದು ಕಿಡಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web HD Kumaraswamy
ಚಿಕ್ಕಬಳ್ಳಾಪುರ:ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದಲ್ಲಿ ಬಿಜೆಪಿಯ ಕೈವಾಡವಿದೆ ಎಂಬ ಶಂಕೆ ಇದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿಯಲ್ಲಿ ನಡೆದ ಪಂಚರತ್ನ ಯಾತ್ರೆಯ ವೇಳೆ ಅವರು ಮಾತನಾಡಿದರು.
ಬೆಳಗಾವಿ ಗಡಿ ಭಾಗದ ಅಭಿವೃದ್ಧಿಗೆ ಕರ್ನಾಟಕದ‌ ಕೊಡುಗೆ ಹೆಚ್ಚಿದೆ. ಹೆಚ್ಚು ಸಕ್ಕರೆ ಕಾರ್ಖಾನೆಗಳು, ಸುವರ್ಣ ಸೌಧ, ನೀರಾವರಿ ಸೌಲಭ್ಯ ಕೊಟ್ಟಿದ್ದೇವೆ. ಶಿಕ್ಷಣ, ಭಾಷಾವಾರು ಸೌಲಭ್ಯದಲ್ಲಿ ಸ್ವಲ್ಪ ಸಮಸ್ಯೆ ಇರೋದು ನಿಜ. ಅಲ್ಲಿನ ಆರ್ಥಿಕ ಚಟುವಟಿಕೆಗಳನ್ನು ಮಹಾರಾಷ್ಟ್ರಕ್ಕೆ ಸೆಳೆಯುವ ಪ್ರಯತ್ನ ಆಗುತ್ತಿದೆ. ಮಹಾರಾಷ್ಟ್ರದ ಧ್ವನಿಗೆ ಕರ್ನಾಟಕ ಬಿಜೆಪಿಯವರ ಕುಮ್ಮಕ್ಕು ಇದೆಯಾ ಎಂಬ ಅನುಮಾನ ಇದೆ ಎಂದು ಹೇಳದರು.

ಶಿವಸೇನೆ ಒಡೆದು ಬಿಜೆಪಿ ಜೊತೆ ಸೇರಿದ ಗುಂಪು ಗಡಿ ತಗಾದೆ ತೆಗೆದಿದೆ. ಎಂಟು ದಿನದ ಕೋಲಾರ ಚಿಕ್ಕಬಳ್ಳಾಪುರ ಪ್ರವಾಸದಲ್ಲಿ ತೆಲುಗು ಭಾಷಿಕರು, ಆಂಧ್ರ ಪರವಾನಗಿ ವಾಹನಗಳನ್ನು ನೋಡಿದೆ. ಆನೇಕಲ್ ಭಾಗದಲ್ಲಿ ತಮಿಳುನಾಡು, ಮಂಗಳೂರು ಭಾಗದಲ್ಲಿ ಕೇರಳ ಗಡಿ ಇದೆ. ಆದರೆ, ಇಲ್ಲೆಲ್ಲೂ ಗಡಿ ವಿವಾದ , ಅಶಾಂತಿ ಇಲ್ಲ. ಬೆಳಗಾವಿಯ ಬಗ್ಗೆ ಮಹಾರಾಷ್ಟ್ರ ಕಣ್ಣು ಯಾಕೆ ಎಂದು ಪ್ರಶ್ನಿಸಿದರು.

ಶಿವರಾಜ್ ಪಾಟೀಲ್ ಅವರನ್ನು ಗಡಿ ಆಯೋಗಕ್ಕೆ ನೇಮಕ ಮಾಡಿದ್ದಾರೆ. ಇವತ್ತು ಶರದ್‌ ಪವಾರ್ ಹೇಳಿಕೆಯನ್ನೂ ಗಮನಿಸಿದ್ದೇನೆ. ಬೆಳಗಾವಿ ಪಡೆದು ಬೇರೆ ಜಾಗ ಬಿಟ್ಟುಕೊಡ್ತೀವಿ ಎನ್ನುತ್ತಿದ್ದಾರೆ. ಪದೇ ಪದೇ ಯಾಕೆ ಕೆದಕುತ್ತಿದ್ದೀರಿ. ಬಿಜೆಪಿ ಸರಕಾರ ಬಂದ ವೇಳೆಯೇ ಗಡಿ ವಿವಾದ ಬರುತ್ತೆ. ಬೊಮ್ಮಾಯಿ ಹೆಬ್ಬೆಟ್ಟಿನ ಮುಖ್ಯಮಂತ್ರಿ, ಹೊರನೋಟಕ್ಕೆ ಕನ್ನಡಿಗರಿಗೆ ಮುಂದೆ ಹೇಳೋದೇ ಬೇರೆ. ಅಂತಿಮವಾಗಿ ದೆಹಲಿ ನಾಯಕರ ಮುಂದೆ ಕೈಕಟ್ಟಿ ನಿಲ್ಲುತ್ತಾರೆ ಎಂದು ಆರೋಪಿಸಿದರು.

Border Dispute: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಬೊಮ್ಮಾಯಿ ವಿರುದ್ಧ ಉದ್ಧವ್ ಠಾಕ್ರೆ ಕಿಡಿ
ಕೇಂದ್ರ ಸರಕಾರ ಉತ್ತರ ಪಿನಾಕಿನಿ, ದಕ್ಷಿಣ ಪಿನಾಕಿನಿ ಜೋಡಣೆ ತೀರ್ಮಾನ ಮಾಡಿದೆ. ಎರಡೂ ನದಿಗಳ ಉಗಮ‌ಸ್ಥಾನ ಕರ್ನಾಟಕಕ್ಕೆ ಏನೂ ಹಂಚಿಕೆ ಮಾಡಿಲ್ಲ. ಈಗ ಮತ್ತೊಂದು ನ್ಯಾಯಾಧೀಕರಣ ಸ್ಥಾಪನೆ ಮಾಡಲು ಮುಂದಾಗಿದೆ. ನಿಮ್ಮ ಒಳ ಆಂತರಿಕ ವ್ಯವಹಾರದ‌ ಮೂಲಕ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಬೇಡ. 25 ಸಂಸದರು ಅಮಿತ್ ಶಾ, ಮೋದಿ ಮುಂದೆ ಮಾತನಾಡುವ ಶಕ್ತಿ ಇಲ್ಲ ಎಂದು ಕುಟುಕಿದರು.

Karnataka Maharashtra Border Dispute: ಕರ್ನಾಟಕಕ್ಕೆ ಒಂದೇ ಒಂದು ಗ್ರಾಮ ಬಿಡೆವು; ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ತೀವಿ: ದೇವೇಂದ್ರ ಫಡ್ನವಿಸ್‌
ಮಹಾರಾಷ್ಟ್ರದವರಿಗೆ ಮುಂದಿನ ಪಾರ್ಲಿಮೆಂಟ್ ಚುನಾವಣೆಗೆ ಈ ವಿಚಾರ ಬೇಕು. ಕರ್ನಾಟಕದಲ್ಲಿ‌ ಮೂರುವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿಗೆ ಜನರ‌ ಬಳಿ ಹೋಗಲು ವಿಷಯ ಸರಕು ಇಲ್ಲ. ಹೀಗಾಗಿ ಗಡಿ ತಗಾದೆ ತೆಗೆಯುತ್ತಿದ್ದಾರೆ. ಯಾರೋ ಮಾಡಿದ ಕೆಲಸಗಳ ಬಗ್ಗೆ ಭಾಷಣ ಮಾಡಬಹುದು. ಜನರ ನೆಮ್ಮದಿ ಕೆಡಿಸಿ ಧರ್ಮದ ವಿಚಾರ ಇಟ್ಕೊಂಡು ಹೋಗ್ತೀರಾ. ಗೋಡಂಬಿ, ಬಾದಾಮಿ‌ ಕೊಟ್ಟು ಕಳುಹಿಸೋಕೆ ಸರ್ವಪಕ್ಷ ಸಭೆಯನ್ನು ಯಾಕೆ ಕರೆಯುತ್ತೀರಿ. ಎರಡೂ ಕಡೆ ನಿಮ್ಮದೆ ಸರ್ಕಾರ, ಅಲ್ಲಿ ಮಾತನಾಡಿಕೊಳ್ಳಿ ಎಂದರು.

Chhatrapati Shivaji: ಶಿವಾಜಿಗೆ ಆದ ಅವಮಾನ ಮರೆಮಾಚಲು ಕರ್ನಾಟಕದೊಂದಿಗೆ ಗಡಿ ತಂಟೆ: ಸಂಜಯ್‌ ರಾವತ್‌
ವಿರೋಧ ಪಕ್ಷಗಳ ಕರೆದು ಏನು ಮಾಡುತ್ತೀರಿ. ಇದು ನಿಮ್ಮ ಜವಾಬ್ದಾರಿ, ಅಲ್ಲೂ ನಿಮ್ಮದೆ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಇದ್ದರೇನು, ಇಲ್ಲಿದ್ದರೇನು ಬೆಳಗಾವಿ.‌ ನಾವೆಲ್ಲರೂ ಭಾರತೀಯರು ಎನ್ನುತ್ತೀರಾ ಅಲ್ವೇ ಎಂದು ಪ್ರಶ್ನಿಸಿದರು. ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರೋಕೆ ಹೊರಟಿದ್ದೀರಲ್ಲ ಇದನ್ನೂ ಹೇಳಿ ಎಂದು ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ