ಆ್ಯಪ್ನಗರ

ವಾಲ್ಮೀಕಿ ಜಯಂತಿ ಪ್ರಚಾರ ಕಾರ್ಯಕ್ಕೆ ಕೈಜೋಡಿಸಿ

ಅ.13ರಂದು ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜಯಂತಿ ಉತ್ಸವದ ಪ್ರಚಾರ ಕಾರ್ಯಕ್ಕೆ ನಾನಾ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಕಚೇರಿಯ ಪ್ರಭಾರ ಅಧಿಕಾರಿ ಲಕ್ಷಿತ್ರ್ಮಕಾಂತ್‌ ಬಿ. ನಾಲವಾರ ಮನವಿ ಮಾಡಿದರು.

Vijaya Karnataka 11 Oct 2019, 5:00 am
ಚಿಕ್ಕಬಳ್ಳಾಪುರ: ಅ.13ರಂದು ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜಯಂತಿ ಉತ್ಸವದ ಪ್ರಚಾರ ಕಾರ್ಯಕ್ಕೆ ನಾನಾ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಕಚೇರಿಯ ಪ್ರಭಾರ ಅಧಿಕಾರಿ ಲಕ್ಷಿತ್ರ್ಮಕಾಂತ್‌ ಬಿ. ನಾಲವಾರ ಮನವಿ ಮಾಡಿದರು.
Vijaya Karnataka Web join the campaign of valmiki jayanti
ವಾಲ್ಮೀಕಿ ಜಯಂತಿ ಪ್ರಚಾರ ಕಾರ್ಯಕ್ಕೆ ಕೈಜೋಡಿಸಿ


ಗುರುವಾರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿನಡೆದ ಪ್ರಚಾರ ಸಮಿತಿ ಸಭೆಯಲ್ಲಿಅವರು ಮಾತನಾಡಿದರು.

ಮೂರು ದಿನ ಪ್ರಚಾರ: ಜಯಂತಿ ಕಾರ್ಯಕ್ರಮದ ಪ್ರಚಾರಕ್ಕಾಗಿ ಆಹ್ವಾನ ಪತ್ರಿಕೆ ಹಾಗೂ ಕರಪತ್ರಗಳನ್ನು ಮುದ್ರಿಸಿ ಸಮುದಾಯದ ಮುಖಂಡರಿಗೆ, ಸಾರ್ವಜನಿಕರಿಗೆ, ನಾನಾ ಇಲಾಖೆಯ ಅಧಿಕಾರಿಗಳಿಗೆ ಹಂಚಿ ಆಹ್ವಾನಿಸಲಾಗುತ್ತದೆ. ಅಲ್ಲದೆ ಪ್ರತಿ ಹೋಬಳಿ ಹಂತದಲ್ಲಿಆಟೊಗಳ ಮೂಲಕ ಕರಪತ್ರಗಳನ್ನು ಹಂಚಿ ಮೂರು ದಿನಗಳ ಕಾಲ ಪ್ರಚಾರ ಮಾಡಲಾಗುತ್ತದೆ ಎಂದು ಹೇಳಿದರು.

ತಾಪಂ ಹರ್ಷವರ್ಧನ್‌ ಮಾತನಾಡಿ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿಸಾರ್ವಜನಿಕರು ಸೇರಿದಂತೆ ಸಮುದಾಯದ ಮುಖಂಡರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಬೇಕು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಸಭೆಯಲ್ಲಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತಾರಣಾಧಿಕಾರಿ ಮಹಂತೇಶ್‌ ಓಲೇಕರ್‌, ವಾಲ್ಮೀಕಿ ಸಮುದಾಯದ ಮುಖಂಡರು, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ, ಜಿಲ್ಲಾಖಜಾನಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ