ಆ್ಯಪ್ನಗರ

ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಗೊಳ್ಳಲಿ- ಡಿಸಿಎಂ ಅಶ್ವಥ್ ನಾರಾಯಣ

ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಅನರ್ಹ ಶಾಸಕರು ಇನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ,ಪಕ್ಷಕ್ಕೆ ಬಂದರೆ ಅವರಿಗೆ ಸ್ವಾಗತ ಎಂದಿದ್ದಾರೆ.

Vijaya Karnataka Web 29 Sep 2019, 7:48 pm
ಚಿಕ್ಕಬಳ್ಳಾಪುರ: ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ ಆಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಮಾತನಾಡಿದ ಅವರು ಅನರ್ಹ ಶಾಸಕರು ಇನ್ನೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಿಲ್ಲ. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ ಎಂದಿದ್ಧಾರೆ.
Vijaya Karnataka Web dcm ashwatanarayan


ಇದೇ ವೇಳೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಕುರಿತಾಗಿ ವಿಶ್ವಾಸ ವ್ಯಕ್ತಪಡಿಸಿದ ಅವರು, 15 ವಿಧಾಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲುವನ್ನು ಸಾಧಿಸುತ್ತದೆ ಎಂದಿದ್ದಾರೆ.

ಫೋನ್‌ಗೆ ಕಳ್ಳಕಿವಿ; ಪ್ರಕರಣದ ಜಾಡು ಬೆನ್ನತ್ತಿರುವ ಸಿಬಿಐ

ಇನ್ನು ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ಪ್ರತ್ಯೇಕವಾಗಿ ವಿಜಯನಗರ ಜಿಲ್ಲೆ ರಚಿಸುವ ರಾಜ್ಯ ಬಿಜೆಪಿ ಸರ್ಕಾರದ ಪ್ರಸ್ತಾಪವನ್ನು ಸಮರ್ಥಿಸಿಕೊಂಡ ಡಿಸಿಎಂ ಅಶ್ವಥ್ ನಾರಾಯಣ,ವಿಜಯನಗರ ಇತಿಹಾಸ ಪ್ರಸಿದ್ದ ಸ್ಥಳವಾಗಿದೆ. ವಿಜಯನಗರ ಸಾಮ್ರಾಜ್ಯ ನಮ್ಮ ಹೆಮ್ಮೆ. ಈ ಕಾರಣಕ್ಕಾಗಿ ವಿಜಯನಗರ ಒಂದು ಜಿಲ್ಲೆಯಾಗಿ ಬೆಳೆಯುವ ನಿಟ್ಟಿನಲ್ಲಿ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಬೇಕು ಎಂದಿದ್ದಾರೆ.

ಯಾವ ಪುರುಷಾರ್ಥಕ್ಕೆ ವಿಜಯನಗರ ಜಿಲ್ಲೆ? ಬಿಎಸ್‌ವೈ ವಿರುದ್ಧ ಸಿಡಿದೆದ್ದ ಮತ್ತೊಬ್ಬ ಬಿಜೆಪಿ ಶಾಸಕ!

ವಿಜಯನಗರ ಜಿಲ್ಲೆಯಾಗಿ ಮಾಡೋ ಕಾರ್ಯಕ್ಕೆ ನಾವು ಸಜ್ಜಾಗಿದ್ದೇವೆ, ಆ ದಾರಿಯಲ್ಲಿ ಮುಂದೆ ಸಾಗುತ್ತೇವೆ. ವಿರೋಧ ವ್ಯಕ್ತಪಡಿಸುವುದು ಅವರವರ ಭಾವನೆಯಾಗಿದೆ. ಮುಖ್ಯಮಂತ್ರಿಗಳು ಒಳ್ಳೆ ನಿಲುವು ತೆಗೆದುಕೊಳ್ಳಲಿದ್ದಾರೆ. ಒಳ್ಳೆ ಕಾರ್ಯಗಳು ಆಗಬೇಕಿದೆ ಎಂಬುವುದು ಆ ಭಾಗದ ಜನರ ಬೇಡಿಕೆ ಆಗಿದೆ. ಜನರ ಬೇಡಿಕೆ ಈಡೇರಿಸೋದು ಸರಕಾರದ ಕರ್ತವ್ಯವಾಗಿದ್ದು ಮುಖ್ಯಮಂತ್ರಿ ಗಳ ನಿಲುವಿನಂತೆ ಅನುಷ್ಠಾನ ಮಾಡೋ ಕೆಲಸ ಮಾಡುತ್ತೇವೆ ಎಂದರು.

ಹಳ್ಳ ದಾಟಿ ಶವ ಹೊತ್ತೊಯ್ದ ಗ್ರಾಮಸ್ಥರು- ಕೊಪ್ಪಳದಲ್ಲೊಂದು ಮನಕಲುಕುವ ಘಟನೆ

ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ಪ್ರತ್ಯೇಕವಾಗಿ ವಿಜಯನಗರ ಜಿಲ್ಲೆ ರಚಿಸುವ ರಾಜ್ಯ ಬಿಜೆಪಿ ಸರಕಾರದ ಪ್ರಸ್ತಾಪಕ್ಕೆ, ಬಳ್ಳಾರಿ ಭಾಗದ ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಸೋಮಶೇಖರ ರೆಡ್ಡಿ ಬಳಿಕ ಇದೀಗ ಅವರ ಸಹೋದರ ಹರಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಕೂಡಾ ಮುಖ್ಯಮಂತ್ರಿ ಯಡಿಯೂರಪ್ಪ ನಿಲುವಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೂತನ ಜಿಲ್ಲೆ ರಚನೆ ಯಾವ ಪುರುಷಾರ್ಥಕ್ಕಾಗಿ ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ