ಆ್ಯಪ್ನಗರ

ತಂಬಾಕು ಸೇವನೆ ಬಿಡಿ, ಆರೋಗ್ಯ ಕಾಪಾಡಿಕೊಳ್ಳಿ

ತಂಬಾಕು ಸೇವನೆ ಆರೋಗ್ಯಕ್ಕೆ ಮಾರಕ. ತಂಬಾಕು ಸೇವನೆಯನ್ನು ನಿಷೇಧ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಎಚ್‌. ಕೋರಡ್ಡಿ ತಿಳಿಸಿದರು.

Vijaya Karnataka 2 Jun 2019, 5:00 am
ಚಿಕ್ಕಬಳ್ಳಾಪುರ : ತಂಬಾಕು ಸೇವನೆ ಆರೋಗ್ಯಕ್ಕೆ ಮಾರಕ. ತಂಬಾಕು ಸೇವನೆಯನ್ನು ನಿಷೇಧ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಎಚ್‌. ಕೋರಡ್ಡಿ ತಿಳಿಸಿದರು.
Vijaya Karnataka Web leave tobacco and maintain health
ತಂಬಾಕು ಸೇವನೆ ಬಿಡಿ, ಆರೋಗ್ಯ ಕಾಪಾಡಿಕೊಳ್ಳಿ


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್‌ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಜಿಪಂ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ. ಪ್ರತಿಯೊಬ್ಬರು ತಂಬಾಕಿನಿಂದ ದೂರವಿರಲು ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿದೆ. ಪ್ರತಿ ವರ್ಷ 10 ಲಕ್ಷ ಕ್ಕಿಂತ ಹೆಚ್ಚು ಜನರು ತಂಬಾಕು ಸಂಬಂಧ ರೋಗಗಳಿಂದ ಮೃತಪಡುತ್ತಿದ್ದಾರೆ. ಇನ್ನಾದರೂ ಸಾರ್ವಜನಿಕರು ಎಚ್ಚೆತ್ತು ತಂಬಾಕು ಸೇವನೆ ಕಡಿಮೆ ಮಾಡಿ ಸದೃಢ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಕೆ.ಎನ್‌.ರೂಪಾ ಮಾತನಾಡಿ, ತಂಬಾಕು ಸೇವನೆ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಕಠಿಣ ಕಾನೂನು ಜಾರಿಯಾದಾಗ ಮಾತ್ರ ತಂಬಾಕು ಉತ್ಪನ್ನಗಳನ್ನು ನಿಯಂತ್ರಿಸಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚಾಗಿ ತಂಬಾಕು ಉತ್ಪನ್ನಗಳಾದ ಧೂಮಪಾನ, ಗುಟ್ಕಾ ಸೇವನೆಯಿಂದ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತ ಪಡಿಸಿದರು.

ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ವಿಜಯ್‌ ಕುಮಾರ್‌, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌ ತಮ್ಮೇಗೌಡ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ಬಿ.ಎಂ ರವಿಶಂಕರ್‌, ಜಿಲ್ಲಾ ಸರ್ವೇಕ್ಷ ಣಾಧಿಕಾರಿ ಡಾ.ಕೆ.ಬಾಬು ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಶಿಕ್ಷ ಣಾಧಿಕಾರಿ ಮಹೇಶ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ