ಆ್ಯಪ್ನಗರ

ಎಸ್ಸೆಸ್ಸೆಲ್ಸಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ: ಸುಧಾಕರ್

ಟ್ವೀಟ್ ಮಾಡಿರುವ ಸಚಿವ ಸುಧಾಕರ್. ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕರಿಗೆ ಮತ್ತು ಜಿಲ್ಲಾಡಳಿತಕ್ಕೆ ನನ್ನ ವಿಶೇಷ ಅಭಿನಂದನೆಗಳು ಎಂದು ಹೇಳಿದ್ದಾರೆ.

Vijaya Karnataka Web 10 Aug 2020, 4:12 pm
ಬೆಂಗಳೂರು: ರಾಜ್ಯ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಫಲಿತಾಂಶ ಪ್ರಕಟ ಮಾಡಿದ್ದಾರೆ. ಈ ಬಾರಿ ರ್ಯಾಂಕ್ ಬದಲಿಗೆ ಗ್ರೇಡ್ ಮೂಲಕ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟಿಸಲಾಗಿದೆ.
Vijaya Karnataka Web DR SUDHAKAR.


ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ..! ದ.ಕ,

ಜಿಲ್ಲಾವಾರು ಫಲಿತಾಂಶಗಳ ಪೈಕಿ ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ಅಚ್ಚರಿ ಮೂಡಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿರುವುದರಿಂದ ಸಂತಸಗೊಂಡಿರುವ ಚಿಕ್ಕಬಳ್ಳಾಪುರ ಶಾಸಕ, ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

'ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ': ಎಸ್ಸೆಎಸ್ಸೆಎಲ್ಸಿ ವಿದ್ಯಾರ್ಥಿಗಳಿಗೆ

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್. ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಚಿಕ್ಕಬಳ್ಳಾಪುರದ ಶಾಸಕನಾಗಿ, ಜಿಲ್ಲಾ ಉಸ್ತುವಾರಿ ಸಚಿವನಾಗಿ ಇದು ಅತೀವ ಸಂತಸ ತಂದಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕರಿಗೆ ಮತ್ತು ಜಿಲ್ಲಾಡಳಿತಕ್ಕೆ ನನ್ನ ವಿಶೇಷ ಅಭಿನಂದನೆಗಳು ಎಂದು ಹೇಳಿದ್ದಾರೆ.


'ಹಿಂದಿ ರಾಜಕಾರಣ' ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ

ಜಿಲ್ಲೆಯಲ್ಲಿ ಒಟ್ಟು ಪಾಸ್ ಆದ ಮಕ್ಕಳ ಸಂಖ್ಯೆಯ ಪ್ರಕಾರ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟಿಸುವುದು ಎಂದು ಫಲಿತಾಂಶಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಅದರಂತೆ ಒಟ್ಟು ಉತ್ತೀರ್ಣಗೊಂಡ ಮಕ್ಕಳ ಸಂಖ್ಯೆಯ ಪ್ರಕಾರ ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡು ಸಾಧನೆಯನ್ನು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ