ಆ್ಯಪ್ನಗರ

ಗುಡಿಬಂಡೆ ಗುಂಪು ಘರ್ಷಣೆಯಲ್ಲಿ ಚಾಕು ಇರಿತ: ಗ್ರಾಮದ ನೀರುಗಂಟಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿಯಲ್ಲಿ ನಡೆದ ಗುಂಪು ಘರ್ಷಣೆ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಾಳುಗಳನ್ನು ಗುಡಿಬಂಡೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Vijaya Karnataka Web 25 Nov 2019, 10:59 pm
ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿ ಗ್ರಾಮದಲ್ಲಿ ಚಂದ್ರಮೌಳೇಶ್ವರ ದೇವರ ಮೆರವಣಿಗೆ ವೇಳೆ ಗುಂಪು ಘರ್ಷಣೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗ್ರಾಮದ ಜಯಚಂದ್ರ ಮತ್ತು ವಾಟರ್ ಮೆನ್ ಚನ್ನರಾಯಪ್ಪ ಗಾಯಗೊಂಡವರು. ಗಾಯಾಳುಗಳನ್ನು ಗುಡಿಬಂಡೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Vijaya Karnataka Web gudibande
ಚಾಕು ಇರಿತದಿಂದ ಗಾಯಗೊಂಡವರು


ಗ್ರಾಮದಲ್ಲಿ ಸೋಮವಾರ ದೇವರ ಉತ್ಸವ ಏರ್ಪಡಿಸಲಾಗಿತ್ತು. ಗ್ರಾಮದಲ್ಲಿ ಚಂದ್ರಮೌಳೇಶ್ವರ ದೇವರ ಮೆರವಣಿಗೆ ಸಂದರ್ಭದಲ್ಲೇ ಊರಿನವರ ಮಧ್ಯೆ ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಚಾಕುವಿನಿಂದ ಇಬ್ಬರಿಗೆ ಇರಿಯಲಾಗಿದೆ. ಈ ಹಿನ್ನೆಲೆಯಲ್ಲಿ ದೇವರ ಉತ್ಸವ ಕೂಡ ರದ್ದಾಗಿದೆ.

ಹಳೇ ದ್ವೇಶದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗುಡಿಬಂಡೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ