ಆ್ಯಪ್ನಗರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತಮ ಕಾರ್ಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತಮ ಕೆಲಸಗಳು ನಡೆಯುತ್ತಿವೆ ಎಂದು ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

Vijaya Karnataka 30 Nov 2018, 5:00 am
ಅಜ್ಜಂಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತಮ ಕೆಲಸಗಳು ನಡೆಯುತ್ತಿವೆ ಎಂದು ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
Vijaya Karnataka Web
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉತ್ತಮ ಕಾರ್ಯ


ಸಮೀಪದ ಶಿವನಿ ಗ್ರಾಮದ ಕುವೆಂಪು ಕಲಾಮಂದಿರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬುಧವಾರ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ನಾಡಿನಾದ್ಯಂತ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಸಮಾಜ ಮುಖಿಯಾಗಿ ಚಿಂತಿಸಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಮುದಾಯ ಭವನ, ದೇವಸ್ಥಾನ, ಅಶಕ್ತರಿಗೆ ನೆರವು, ಆರ್ಥಿಕವಾಗಿ ಹಿಂದುಳಿದವರಿಗೆ ಧನ ಸಹಾಯ ನೀಡುತ್ತಿದ್ದಾರೆ. ಮದ್ಯವರ್ಜನ ಶಿಬಿರ ಏರ್ಪಡಿಸಿ, ಮದ್ಯ ವ್ಯಸನಿಗಳನ್ನು ಮುಖ್ಯವಾಹಿನಿಗೆ ತರುವುದರ ಮೂಲಕ ಅವರು ಸಮಾಜದಲ್ಲಿ ಹೆಂಡತಿ-ಮಕ್ಕಳೊಂದಿಗೆ ನೆಮ್ಮದಿಯ ಜೀವನ ಸಾಗಿಸುವಂತೆ ಮಾಡುತ್ತಿದ್ದಾರೆ ಎಂದರು.

ಧಾರ್ಮಿಕ ಉಪನ್ಯಾಸ ನೀಡಿದ ನಿವೃತ್ತ ಶಿಕ್ಷ ಕ ಆನಂದಮೂರ್ತಿ, ಜೀವನದಲ್ಲಿ ನಾವು ಧಾರ್ಮಿಕತೆ ರೂಢಿಸಿಕೊಂಡರೆ ನಮ್ಮ ಆಚಾರ-ವಿಚಾರಗಳು, ನಡೆ-ನುಡಿಗಳು ಉತ್ತಮವಾಗಿರುತ್ತವೆ. ಸಂಸ್ಕೃತಿ-ಸಂಸ್ಕಾರವನ್ನು ಬೆಳೆಸುತ್ತವೆ. ಶಾಂತಿ, ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಾಮು ಮಾತನಾಡಿ, ಪ್ರತಿಯೊಬ್ಬರೂ ಸಮಾನತೆಯಿಂದ ಇದ್ದಲ್ಲಿ, ಒಂದು ಕುಟುಂಬ ಒಂದು ಗ್ರಾಮ ಉತ್ತಮ ರೀತಿಯಿಂದ ಇರುತ್ತದೆ. ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳಿಗೆ ಸದಸ್ಯರಾಗಿರುವ ಮೂಲಕ ಮಹಿಳೆಯರು ಸೌಲಭ್ಯ ಪಡೆದು ಆರ್ಥಿಕವಾಗಿ ಸಬಲರಾಗಬೇಕೆಂದು ಹೇಳಿದರು.

ಪೊಲೀಸ್‌ ಮಧು, ಗ್ರಾ.ಪಂ. ಉಪಾಧ್ಯಕ್ಷೆ ಯಶೋಧÜ, ಪೂಜಾ ಸಮಿತಿ ಅಧ್ಯಕ್ಷೆ ನೇತ್ರಾವತಿ, ಒಕ್ಕೂಟ ಅಧ್ಯಕ್ಷೆ ಲತಾ, ಮೇಲ್ವಿಚಾರಕ ಸಿ.ಎಚ್‌. ದಯಾನಂದ್‌, ಮಮತಾ ಹಾಜರಿದ್ದರು. ಇದಕ್ಕೆ ಮೊದಲು ಬೆಳಗ್ಗೆ ತಿಪಟೂರು ಯದುಕೃಷ್ಣ ಮತ್ತು ಸಂಗಡಿಗರಿಂದ ಪೂಜಾ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು. ಶಿವನಿ ಬಾಲಾಜಿ ಭಜನಾ ಮಂಡಳಿಯಿಂದ ಭಜನೆ ಏರ್ಪಡಿಸಲಾಗಿತ್ತು. ನೂರಾರು ಮಹಿಳೆಯರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ