ಆ್ಯಪ್ನಗರ

ಸಾಮಾಜಿಕ ಪಿಡುಗಿನಿಂದ ಮಕ್ಕಳ ರಕ್ಷಿಸಿ

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಬಾಲ್ಯದಲ್ಲಿಯೇ ಧೂಮಪಾನ, ಮದ್ಯಪಾನ, ಮಾದಕ ವ್ಯಸನ ಮತ್ತಿತರೆ ಅನೇಕ ಸಮಸ್ಯೆಗಳು ಮಕ್ಕಳನ್ನು ಕಾಡುತ್ತಿವೆ ಎಂದು ಮಕ್ಕಳ ವಿಶೇಷ ಪೊಲೀಸ್‌ ಘಟಕದ ಸಹಾಯಕ ಪೊಲೀಸ್‌ ಉಪನಿರೀಕ್ಷಕಿ ಗಾಯತ್ರಿ ಹೇಳಿದರು.

Vijaya Karnataka 31 May 2019, 5:00 am
ಚಿಕ್ಕಮಗಳೂರು : ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಬಾಲ್ಯದಲ್ಲಿಯೇ ಧೂಮಪಾನ, ಮದ್ಯಪಾನ, ಮಾದಕ ವ್ಯಸನ ಮತ್ತಿತರೆ ಅನೇಕ ಸಮಸ್ಯೆಗಳು ಮಕ್ಕಳನ್ನು ಕಾಡುತ್ತಿವೆ ಎಂದು ಮಕ್ಕಳ ವಿಶೇಷ ಪೊಲೀಸ್‌ ಘಟಕದ ಸಹಾಯಕ ಪೊಲೀಸ್‌ ಉಪನಿರೀಕ್ಷಕಿ ಗಾಯತ್ರಿ ಹೇಳಿದರು.
Vijaya Karnataka Web
ಸಾಮಾಜಿಕ ಪಿಡುಗಿನಿಂದ ಮಕ್ಕಳ ರಕ್ಷಿಸಿ


ಹರಿಹರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಹಳ್ಳಿಯಲ್ಲಿ ಮಕ್ಕಳ ಸಹಾಯವಾಣಿ-1098 ಹಾಗೂ ಬಾಲ್ಯವಿವಾಹದ ಬಗ್ಗೆ ಬುಧವಾರ ಏರ್ಪಡಿಸಿದ್ದ ಜನ ಜಾಗೃತಿ ಕಾರ್ಯಕ್ರಮ ತೆರೆದ ಮನೆ ಉದ್ಘಾಟಿಸಿ ಅವರು ಮಾತನಾಡಿದರು.

ನಾನಾ ಪಿಡುಗುಗಳಿಂದ ಮಕ್ಕಳನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ 1098 ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯನಡೆಸಿದರೆ, ಬಾಲ್ಯವಿವಾಹ ನೆರವೇರಿಸಿದರೆ ಅಂತವರಿಗೆ 2 ವರ್ಷ ಸಜೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾಯಿದೆಯಡಿಯಲ್ಲಿಯೂ ದೂರು ದಾಖಲಿಸಲಾಗುತ್ತದೆ ಎಂದು ಹೇಳಿದರು.

ಹರಿಹರದಹಳ್ಳಿ ಪಿಡಿಓ ವಿಜಯ ಮಾತನಾಡಿ, ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು ಅದನ್ನು ತಡೆಯಲು ಗ್ರಾಮ ಮಟ್ಟದಲ್ಲಿ ನಾವು ಸಹ ಬಾಲ್ಯ ವಿವಾಹ ನಿಷೇದಾಧಿಕಾರಿಗಳಾಗಿರುತ್ತೇವೆ. ನಮಗೂ ಮಾಹಿತಿ ನೀಡಿದರೆ ಬಾಲ್ಯ ವಿವಾಹ ತಡೆಯಲು ಸಹಕಾರಿಯಾಗುತ್ತದೆ ಎಂದರು.

ಕುರುಬರಹಳ್ಳಿ ಶಾಲೆಯ ಮುಖ್ಯಶಿಕ್ಷ ಕ ಲೋಕನಾಥ್‌ ಮಾತನಾಡಿದರು.ಗ್ರಾಮಪಂಚಾಯಿತಿ ಸದಸ್ಯ ಕೆಂಚೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷ ಣಾ ಘಟಕದ ಆಪ್ತಸಮಾಲೋಚಕಿ ರೇಣುಕ, ಕಿರಿಯ ಆರೋಗ್ಯ ಮಹಿಳಾ ಸಹಾಯಕಿ ಪ್ರೇಮ್‌ಕುಮಾರಿ, ಮಕ್ಕಳ ಸಹಾಯವಾಣಿಯ ಜಿಲ್ಲಾ ಸಂಯೋಜಕಿ ಅಶ್ವಿನಿ, ಮಧು, ದಿನೇಶ್‌, ಚೆಲುವರಾಜ್‌ ಹಾಜರಿದ್ದರು. ಬಿ.ಎನ್‌ ಮಧುರ ನಿರೂಪಿಸಿ, ರುಕ್ಮಿಣಿ ಸ್ವಾಗತಿಸಿದರು. ರವಿಪ್ರಕಾಶ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ