ಆ್ಯಪ್ನಗರ

ಚಿಕ್ಕಮಗಳೂರು ತಾಲೂಕಿನಲ್ಲಿ ಮನೆಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ಚಾಲಕ ಸೇರಿ ಇಬ್ಬರ ಸಾವು

ಟ್ರ್ಯಾಕ್ಟರ್‌ ಮನೆಗೆ ಡಿಕ್ಕಿ ಹೊಡೆದು ಚಾಲಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದ ಬೆಟ್ಟದ‌ ಮಳಲಿ ತಿರುವಿನಲ್ಲಿ‌ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

Vijaya Karnataka Web 8 Feb 2020, 3:24 pm
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ತಿರುವಿನಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಚಾಲಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಟ್ಟದ ಮಳಲಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web ckm accident


ಚಿಕ್ಕಮಗಳೂರು ತಾಲೂಕಿನ ಬೆಟ್ಟದ ಮಳಲಿ ಗ್ರಾಮದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿದ್ದ ಮನೆಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಜುನಾಥ್ (38) ಹಾಗೂ ಗೋವಿಂದ‌ಶೆಟ್ಟಿ (62) ಮೃತ ದುರ್ದೈವಿಗಳಾಗಿದ್ದು, ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದ ಬೆಟ್ಟದ‌ ಮಳಲಿ ತಿರುವಿನಲ್ಲಿ‌ ಘಟನೆ ನಡೆದಿದೆ. ಮೃತರು ಬೆಟ್ಟದ ಮಳಲಿ ನಿವಾಸಿಗಳು ಎಂದು ತಿಳಿದುಬಂದಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿ: ಬೆಳಗಾವಿ: ಟ್ರ್ಯಾಕ್ಟರ್‌ ಪಲ್ಟಿಯಾಗಿ ಏಳು ಮಂದಿ ದುರ್ಮರಣ

ಬೆಳಗಾವಿ ಜಿಲ್ಲೆಯಲ್ಲೂ ಮೂವತ್ತು ಜನರಿದ್ದ ಟ್ರ್ಯಾಕ್ಟರ್ ಪಲ್ಟಿ ಆಗಿ 7 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಮಾಸುವ ಮುನ್ನವೇ ರಾಜ್ಯದ ಮಲೆನಾಡು ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಅಪಘಾತ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಪಾರಿವಾಳಗಳ ಮಾರಣಹೋಮ: ಆತಂಕದಲ್ಲಿ ಸ್ಥಳೀಯ ಜನತೆ

ಮಂಡ್ಯ : ಭೀಕರ ರಸ್ತೆ ಅಪಘಾತ, ಮೂರು ಮಂದಿ ಸ್ಥಳದಲ್ಲೇ ಸಾವು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ