ಆ್ಯಪ್ನಗರ

ಅಕ್ರಮ ಗೋ ಸಾಗಣೆದಾರರ ಮೇಲೆ ಹಲ್ಲೆ, ಆರೋಪ: ಶೃಂಗೇರಿಯಲ್ಲಿ ಬಜರಂಗದಳ ಕಾರ್ಯಕರ್ತರ ಬಂಧನ

ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಹಲ್ಲೆ ನಡೆಸಿದ ಆರೋಪದ ಮೇಲೆ ಬಜರಂಗದಳದ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕೈಮನೆ ಬಳಿ ಎರಡು ಕ್ಯಾಂಟರ್‌ನಲ್ಲಿ 35 ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ವಾಹನದ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದರು.

Vijaya Karnataka Web 15 Jan 2021, 11:24 am
ಶೃಂಗೇರಿ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಜರಂಗದಳದ ನಾಲ್ವರು ಕಾರ್ಯಕರ್ತರ ಮೇಲೆ ಗುರುವಾರ ಪ್ರಕರಣ ದಾಖಲಾಗಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಜ.8ರಂದು ಬೆಳಗಿನ ಜಾವ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ತನಿಕೋಡು ಗೇಟ್‌ ಹಾಗೂ ಶೃಂಗೇರಿ ಆಗುಂಬೆ ರಸ್ತೆಯ ಕೈಮನೆ ಬಳಿ ಎರಡು ಕ್ಯಾಂಟರ್‌ನಲ್ಲಿ 35 ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ವಾಹನದ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ತಡೆ ಹಿಡಿದಿದ್ದರು.
ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌, ಬೈಕ್ ಖದೀಮರ ಬಂಧನ: 12 ಲಕ್ಷ ರೂ. ಮೌಲ್ಯದ ವಾಹನ ವಶ!

ಈ ಸಂದರ್ಭ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಗೋಸಾಗಾಟ ನಡೆಸುತ್ತಿದ್ದ ಒಬ್ಬ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.
ಚಿನ್ನ ಖರೀದಿ ನೆಪದಲ್ಲಿ ಕಳ್ಳಿಯ ಕೈಚಳಕ..! ಸಿಸಿಟಿವಿಯಲ್ಲಿ ಸೆರೆಯಾಯ್ತು ಆಭರಣ ಕಳವು..!

ಈ ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತರಾದ ಆದರ್ಶ,ಅಭಿಷೇಕ್‌,ನಾಗೇಶ್‌ ಹಾಗೂ ರವಿ ಸಂಜಯ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ