ಆ್ಯಪ್ನಗರ

ವರನಟ ಡಾ. ರಾಜ್‌ಕುಮಾರ್‌ ಜನ್ಮ ದಿನಾಚರಣೆ

ಕನ್ನಡ ಚಲನಚಿತ್ರರಂಗದ ಮೇರು ನಟ ಡಾ.ರಾಜ್‌ಕುಮಾರ್‌ ಅವರ 91ನೇ ಜನ್ಮ ದಿನವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.

Vijaya Karnataka 25 Apr 2019, 5:00 am
ಚಿಕ್ಕಮಗಳೂರು : ಕನ್ನಡ ಚಲನಚಿತ್ರರಂಗದ ಮೇರು ನಟ ಡಾ.ರಾಜ್‌ಕುಮಾರ್‌ ಅವರ 91ನೇ ಜನ್ಮ ದಿನವನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.
Vijaya Karnataka Web actor dr rajkumar birthday celebration
ವರನಟ ಡಾ. ರಾಜ್‌ಕುಮಾರ್‌ ಜನ್ಮ ದಿನಾಚರಣೆ


ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ಅವರು ವರನಟ ಡಾ.ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಉಪವಿಭಾಗಾಧಿಕಾರಿ ಶಿವಕುಮಾರ್‌, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್‌, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಾಂತಿ ಪ್ರಿಯ, ಜಿಲ್ಲಾ ಆಯುಷ್‌ ಇಲಾಖೆ ಅಧಿಕಾರಿ ಡಾ.ಗೀತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ, ವಾರ್ತಾ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾ ಡಾ.ರಾಜ್‌ಕುಮಾರ್‌ ಸಂಘದ ಪದಾಧಿಕಾರಿಗಳು, ಡಾ.ರಾಜ್‌ಕುಮಾರ್‌ ಅಭಿಮಾನಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ