ಆ್ಯಪ್ನಗರ

ಸರಕಾರದ ಸೌಲಭ್ಯ ಸಮರ್ಪಕ ಬಳಕೆಗೆ ಸಲಹೆ

ಸರಕಾರ, ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾವಂತರಾಗಿ ಹೊರಹೊಮ್ಮಬೇಕು ಎಂದು ವಾಸವಿ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎಸ್‌.ಎ.ವಾಸುದೇವಮೂರ್ತಿ ಸಲಹೆ ಮಾಡಿದರು.

Vijaya Karnataka 13 Mar 2019, 5:00 am
ಚಿಕ್ಕಮಗಳೂರು : ಸರಕಾರ, ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾವಂತರಾಗಿ ಹೊರಹೊಮ್ಮಬೇಕು ಎಂದು ವಾಸವಿ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಎಸ್‌.ಎ.ವಾಸುದೇವಮೂರ್ತಿ ಸಲಹೆ ಮಾಡಿದರು.
Vijaya Karnataka Web CKM-12RUDRAP5


ನಗರ ಹೊರವಲಯದ ಹಿರೇಮಗಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳ ನೆರವಿನಿಂದ ನವೀಕರಿಸಲಾದ 2.5 ಲಕ್ಷ ರೂ.ವೆಚ್ಚದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬಹಳಷ್ಟು ವರ್ಷದ ಹಿಂದೆ ಬಡವರಿಗೆ ಶಿಕ್ಷ ಣ ಮರೀಚಿಕೆಯಾಗಿತ್ತು. ಗ್ರಾಮೀಣ ಮಕ್ಕಳು ಮೈಲಿಗಟ್ಟಲೆ ನಡೆದು ಅವರಿವರ ಮನೆಯಲ್ಲಿ ವಾರಾನ್ನದೂಟ ಮಾಡಿ ವಿದ್ಯಾರ್ಜನೆ ಮಾಡಬೇಕಿತ್ತು. ಆದರೆ, ಇತ್ತೀಚಿಗೆ ಪರಿಸ್ಥಿತಿ ಬದಲಾಗಿದೆ. ಸರಕಾರಗಳು ಕೋಟ್ಯಂತರ ರೂ. ವ್ಯಯಿಸಿ ಅನೇಕ ಸೌಲಭ್ಯದ ಜತೆಗೆ ಉಚಿತ ಶಿಕ್ಷ ಣ ನೀಡುತ್ತಿವೆ. ದಾನಿಗಳು ಮತ್ತು ಸಂಘ ಸಂಸ್ಥೆಗಳೂ ಶಿಕ್ಷ ಣಕ್ಕಾಗಿ ಅನೇಕ ಸವಲತ್ತುಗಳನ್ನು ನೀಡುತ್ತಿವೆ. ಅದನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ವಿದ್ಯೆ ಯಾರೂ ಕದಿಯಲಾಗದ ಸಂಪತ್ತು. ವಿದ್ಯಾವಂತನನ್ನು ಸಮಾಜ ಗೌರವಿಸುತ್ತದೆ. ಶಿಕ್ಷ ಣವಂತರಾದರೆ ಮಾತ್ರ ಸ್ವಾವಲಂಬಿಗಳಾಗಿ ಬದುಕಲು ಸಾಧ್ಯವಿದೆ ಎಂದರು.

ಮುಖ್ಯಶಿಕ್ಷ ಕ ಎ.ಇ.ಅಶೋಕ್‌ ಪ್ರಾಸ್ತಾವಿಕ ಮಾತನಾಡಿ, ಶಾಲೆಯ ನವೀಕರಣಕ್ಕೆ ದೇಣಿಗೆ ನೀಡಿ ಸಹಕರಿಸಿದ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಶಾಲೆಯ ನವೀಕರಣಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಮತ್ತು ಸಹಕರಿಸಿದವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು. ವರ್ಗಾವಣೆಯಾಗಿ ಬಂದ ಕೇವಲ 4 ತಿಂಗಳಲ್ಲಿ ಶಾಲೆಯನ್ನು ಅಭಿವೃದ್ಧಿ ಪಡಿಸಿದ ಮುಖ್ಯ ಶಿಕ್ಷ ಕ ಎ.ಇ.ಅಶೋಕ್‌ ಅವರನ್ನು ಶಾಲಾಭವೃದ್ಧಿ ಸಮಿತಿಯಿಂದ ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀದೇವಿ ಮೋಹನ್‌, ಡಯಟ್‌ ಪ್ರಾಂಶುಪಾಲ ಪ್ರಕಾಶ್‌, ಕ್ಷೇತ್ರ ಸಮನ್ವಯಾಧಿಕಾರಿ ಜಯರಾಂ, ಅಕ್ಷ ರ ದಾಸೋಹ ಸಹಾಯಕ ನಿರ್ದೇಶಕ ಉದಯಕುಮಾರ್‌, ಮುಖ್ಯಶಿಕ್ಷ ಕರ ಸಂಘದ ಅಧ್ಯಕ್ಷ ರೇವಣ್ಣಗೌಡ, ಪ್ರಾಥಮಕ ಶಾಲಾ ಶಿಕ್ಷ ಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಂದರೇಶ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ