ಆ್ಯಪ್ನಗರ

ಮೈತ್ರಿಗೆ ಜಯಭೇರಿ ನಿಶ್ಚಿತ: ದತ್ತ

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷ ಗಳಾದ ಕಾಂಗ್ರೆಸ್‌, ಜೆಡಿಎಸ್‌ ನಡುವೆ ಸಂಪೂರ್ಣ ಹೊಂದಾಣಿಕೆ ಇದೆ ಎಂದು ಜೆಡಿಎಸ್‌ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ , ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

Vijaya Karnataka 15 Apr 2019, 5:00 am
ಕಡೂರು: ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷ ಗಳಾದ ಕಾಂಗ್ರೆಸ್‌, ಜೆಡಿಎಸ್‌ ನಡುವೆ ಸಂಪೂರ್ಣ ಹೊಂದಾಣಿಕೆ ಇದೆ ಎಂದು ಜೆಡಿಎಸ್‌ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ , ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.
Vijaya Karnataka Web alliance will win
ಮೈತ್ರಿಗೆ ಜಯಭೇರಿ ನಿಶ್ಚಿತ: ದತ್ತ


ತಾಲೂಕಿನ ಕುಪ್ಪಾಳು, ಹಿರೇನಲ್ಲೂರು ಕಾಲೊನಿ, ಕೇದಿಗೆರೆ, ಕೆರೆಸಂತೆ, ಬಳ್ಳೇಕೆರೆ ಮುಂತಾದ ಗ್ರಾಮದಲ್ಲಿ ಭಾನುವಾರ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರವಾಗಿ ಬಿರುಸಿನ ಪ್ರಚಾರ ನಡೆಸಿದ ಅವರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಹಾಗೂ ಮುಖಂಡರು ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರವಾಗಿ ಮತಪ್ರಚಾರದಲ್ಲಿ ತೊಡಗಿದ್ದಾರೆ. ಜಾತ್ಯತೀತ ಮತಗಳಾದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ ಮತ್ತು ಪಂಗಡದವರೂ ಸೇರಿದಂತೆ ಸಣ್ಣ ಸಣ್ಣ ಸಮಾಜ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ ಎಂದರು.

ಕಡೂರು ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣ ಅವರಿಗೆ ಈ ಬಾರಿ ಹೆಚ್ಚಿನ ಮತ ಅಭಿಸಲಿದ್ದು ಉತ್ತಮ ಲೀಡ್‌ ಆಗಲಿದೆ. ಕಾಂಗ್ರೆಸ್‌ ಪಕ್ಷ ದ ಬಹುತೇಕ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ದುಡಿಯುತ್ತಿದ್ದಾರೆ. ಹಾಸನ ಲೋಕಸಭೆ ಕ್ಷೇತ್ರದ 8 ವಿಧಾನಸಭೆ ಕ್ಷೇತ್ರಗಳಲ್ಲಿ ಕಡೂರು ಮುಂಚೂಣಿಯಲ್ಲಿದೆ ಎಂದು ಹೇಳಿದರು.

ತುಮಕೂರು, ಮಂಡ್ಯ ಮತ್ತು ಹಾಸನ ಸೇರಿದಂತೆ ಜೆಡಿಎಸ್‌ ಪಕ್ಷ ವು 5 ಕ್ಷೇತ್ರದಲ್ಲಿ ಜಯಭೇರಿ ಬಾರಿಸುವುದು ನಿಸ್ಸಂಶಯ. ತಾವು ಬೇಲೂರು ಕ್ಷೇತ್ರದಲ್ಲಿ ಶನಿವಾರ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಮತ್ತು ದೇಶದಲ್ಲಿ ಮೋದಿ ಹವಾ ಇಲ್ಲ ಎಂದರು.

ಟೀಕಾಕಾರರಿಗೆ ಮೇ 23ರ ಫಲಿತಾಂಶ ಸ್ಪಷ್ಟ ಉತ್ತರ ನೀಡಲಿದೆ. ಮೈತ್ರಿಕೂಟದ ಮೇಲೆ ಜನರು ಪೂರ್ಣ ವಿಶ್ವಾಸ ಇಟ್ಟಿರುವುದರಿಂದ ರಾಜ್ಯದಲ್ಲಿ ಗಣನೀಯ ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಗೆ ಭ್ರಮನಿರಸನವಾಗಲಿದೆ ಎಂದರು.

ಈ ಸಂದರ್ಭ ಜೆಡಿಎಸ್‌ ಮುಖಂಡರಾದ ಕೋಡಿಹಳ್ಳಿ ಮಹೇಶ್ವರಪ್ಪ, ಬಸವರಾಜು, ಶಂಕರ್‌ ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ