ಆ್ಯಪ್ನಗರ

ದೌರ್ಜನ್ಯಕ್ಕೊಳಗಾದ ಮಹಿಳೆಯರ ಆರ್ಥಿಕ ಸೌಲಭ್ಯಕ್ಕೆ ಅರ್ಜಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಲಿಂಗತ್ವ ಅಲ್ಪಂಖ್ಯಾತರಿಗೆ, ಎಚ್‌ಐವಿ ಸೋಂಕಿತ ಮಹಿಳೆಯರಿಗೆ, ಲೈಂಗಿಕ ಕಾರ್ಯಕತೆಯರು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಆರ್ಥಿಕ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.

Vijaya Karnataka 9 Aug 2019, 5:00 am
ಚಿಕ್ಕಮಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಲಿಂಗತ್ವ ಅಲ್ಪಂಖ್ಯಾತರಿಗೆ, ಎಚ್‌ಐವಿ ಸೋಂಕಿತ ಮಹಿಳೆಯರಿಗೆ, ಲೈಂಗಿಕ ಕಾರ್ಯಕತೆಯರು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಆರ್ಥಿಕ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ.
Vijaya Karnataka Web application for financial benefit of abused women
ದೌರ್ಜನ್ಯಕ್ಕೊಳಗಾದ ಮಹಿಳೆಯರ ಆರ್ಥಿಕ ಸೌಲಭ್ಯಕ್ಕೆ ಅರ್ಜಿ


ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆದಾಯೋತ್ಪನ್ನಕರ ಚಟುವಟಿಕೆ ನಡೆಸಲು ಧನಶ್ರೀ ಯೋಜನೆಯಡಿ, ಎಚ್‌ಐವಿ ಸೋಂಕಿತ ಮಹಿಳಾ ಸಂತ್ರಸ್ತೆಯರಿಗೆ ಸ್ವಯಂಉದ್ಯೋಗ ಕೈಗೊಳ್ಳಲು ಚೇತನ ಯೋಜನೆಯಡಿ, ಲೈಂಗಿಕ ಕಾರ್ಯಕತೆಯರು ಮತ್ತು ಲೈಂಗಿಕ ಶೋಷಣೆಗೊಳಗಾದ ಮಹಿಳೆಯರಿಗೆ ಪುನವರ್ಸತಿ ಕಲ್ಪಿಸಲು ಮತ್ತು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ನಿಗಮವು 50 ಸಾವಿರ ರೂ. ಆರ್ಥಿಕ ಸೌಲಭ್ಯ(25 ಸಾವಿರ ರೂ. ಸಾಲ ಮತ್ತು 25 ಸಾವಿರ ರೂ. ಸಹಾಯಧನ) ಒದಗಿಸುತ್ತಿದೆ.

ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ 08262-220950ನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ