ಆ್ಯಪ್ನಗರ

ಚಿಕ್ಕಮಗಳೂರಿನ ದುರ್ಗದಹಳ್ಳಿಯಲ್ಲಿ ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮಗು ಸಾವು

ಕಳೆನಾಶಕ ಕುಡಿದು ಹಲವು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಗು ಮೃತಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಮಗುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ.

Vijaya Karnataka Web 12 Nov 2019, 11:07 am
ಚಿಕ್ಕಮಗಳೂರು: ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. ಅಕ್ಟೋಬರ್ 24ರಂದು ಕಳೆನಾಶಕ ಸೇವಿಸಿದ್ದ ಮಗು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದೆ.
Vijaya Karnataka Web baby death


ಈ ಸುದ್ದಿ ಓದಿ: ಮಲಗಿದ್ದ ಮಗುವಿಗೆ ಕಚ್ಚಿದ ಹೆಗ್ಗಣ: ವಿಜಯಪುರದಲ್ಲಿ ಮೃತಪಟ್ಟ 6 ತಿಂಗಳ ಕೂಸು

ಅಕ್ಟೋಬರ್ 24ರಂದು ಜ್ಯೂಸ್‌ ಎಂದು ಭಾವಿಸಿ 3 ವರ್ಷದ ಮಗು ಅಗಸ್ತ್ಯ ಕಳೆನಾಶಕವನ್ನು ಸೇವಿಸಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್-ಪೂಜಿತ ದಂಪತಿಯ ಏಕೈಕ ಪುತ್ರನಾಗಿದ್ದ ಅಗಸ್ತ್ಯನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಇದನ್ನೂ ಓದಿ: ಬಾಗಲಕೋಟೆ: ಮನೆ ಕುಸಿದು 11 ತಿಂಗಳ ಮಗು ಸಾವು

ಆದರೆ 18 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಗು ಮೃತಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಗಸ್ತ್ಯ ಸಾವಿಗೀಡಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಳೆನಾಶಕದಿಂದ ಕ್ಯಾನ್ಸರ್‌: ದಂಪತಿಗೆ 14,000 ಕೋಟಿ ಪರಿಹಾರ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ