ಆ್ಯಪ್ನಗರ

ಬೀಕನಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಗಿ ಭಾಗೀರಥಿ ಆಯ್ಕೆ

ತಾಲೂಕಿನ ಬೀಕನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಭಾಗೀರಥಿ ಜಯಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Vijaya Karnataka 13 Jun 2019, 6:27 pm
ಚಿಕ್ಕಮಗಳೂರು : ತಾಲೂಕಿನ ಬೀಕನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಭಾಗೀರಥಿ ಜಯಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Vijaya Karnataka Web CKM-12RUDRAP1


ಅಧಿಕಾರ ಹಂಚಿಕೆಯ ಒಪ್ಪಂದದ ಆಧಾರದಲ್ಲಿ ನಿಕಟಪೂರ್ವ ಅಧ್ಯಕ್ಷೆ ಭಾಗ್ಯಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಚುನಾವಣೆ ನಡೆದು ಭಾಗೀರಥಿ ಅವರು ಅವಿರೋಧ ಆಯ್ಕೆಯಾದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಜೆ.ಸೋಮಶೇಖರ್‌ ಅವರು ನೂತಮ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಬೀಕನಹಳ್ಳಿ ಗ್ರಾಮಪಂಚಾಯಿತಿಗೆ ಕಳೆದ 4 ವರ್ಷದಲ್ಲಿ ಯಾವುದೇ ಜಾತಿಯನ್ನು ಕಡೆಗಣಿಸದೆ ಎಲ್ಲ ವರ್ಗದ ಪ್ರತಿನಿಧಿಗಳಿಗೆ ಅಧ್ಯಕ್ಷ ಸ್ಥಾನದ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರೆ ಅದು ಬಿಜೆಪಿ ಪಕ್ಷದ ಸಿದ್ದಾಂತ. ಎಲ್ಲರು ಗ್ರಾಮದ ಅಭ್ಯುದಯಕ್ಕಾಗಿ ಕೆಲಸ ಮಾಡಿದ್ದಾರೆ ಎಂದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿವ ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಿ ಬಡವರ ಪರವಾದ ಕೆಲಸ ಮಾಡಲಾಗಿದೆ ಎಂದರು.

ಅಧ್ಯಕ್ಷೆ ಭಾಗೀರಥಿ ಜಯಣ್ಣ ಮಾತನಾಡಿ, ಪಕ್ಷ ದ ಮುಖಂಡರು ಹಾಗೂ ಪಂಚಾಯಿತಿ ಸದಸ್ಯರ ಸಹಕಾರದಿಂದ ಇಂದು ಅಧ್ಯಕ್ಷ ಸ್ಥಾನ ದೊರೆತಿದೆ. ಹಿರಿಯರ ಮಾರ್ಗದರ್ಶನದಲ್ಲಿ ಊರಿನ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷ ಎಚ್‌.ಡಿ.ತಮ್ಮಯ್ಯ ಮಾತನಾಡಿ, ಪಕ್ಷ ದಲ್ಲಿ ನಿಷ್ಠೆಯಿಂದ ಕೆಲಸ ಮಾಡಿ ಗುರುತಿಸಿಕೊಂಡಿರುವ ಸಾಮಾನ್ಯ ಕಾರ್ಯಕರ್ತನಿಗೆ ಅಧ್ಯಕ್ಷ ನಾಗಲು ಅವಕಾಶ ಸಿಗುತ್ತದೆ ಎಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಶಾಸಕ ಸಿ.ಟಿ.ರವಿಯವರು ಕ್ಷೇತ್ರದಲ್ಲಿ ಅಭಿವೃದ್ದಿಗೆ ಪೂರಕವಾದ ಕೆಲಸ ಮಾಡುತ್ತಿದ್ದಾರೆ ಎಂದರು. ತಾಲೂಕು ಪಂಚಾಯಿತಿ ಅಧ್ಯಕ್ಷ ನೆಟ್ಟೆಕೆರೆಹಳ್ಳಿ ಜಯಣ್ಣ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಎಪಿಎಂಸಿ ಸದಸ್ಯರಾದ ರಾಜೀವ್‌, ವಿಕ್ರಾಂತ್‌, ಮಾಜಿ ಅಧ್ಯಕ್ಷೆ ಪ್ರೇಮಾಬೀರೇಗೌಡ, ವಿಜಯ್‌ಕುಮಾರ್‌,ಮೀನಾಕ್ಷ ಮ್ಮ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ