ಆ್ಯಪ್ನಗರ

ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಮಿಡ್‌ನೈಟ್‌ ಸಭೆ: ರಾಜಕೀಯ ವಲಯದಲ್ಲಿ ಸಂಚಲನ

​​ಜ.23ರಂದು ಸಚಿವ ರಮೇಶ್‌ ಜಾರಕಿಹೊಳಿ ಪ್ರಗತಿ ಪರಿಶೀಲನಾ ಸಭೆ ನಿಗದಿಯಾಗಿತ್ತು. ಆದರೆ, ಶುಕ್ರವಾರ ರಾತ್ರಿ ಗುಪ್ತಸಭೆ ನಡೆಸಿದ ರಮೇಶ್‌ ಜಾರಕಿಹೊಳಿ ಶನಿವಾರ ನಿಗದಿಯಾಗಿದ್ದ ಪ್ರಗತಿ ಪರಿಶೀಲನಾ ಸಭೆ ದಿಢೀರ್‌ ರದ್ದುಗೊಳಿಸಿದ್ದು, ಚರ್ಚೆಗೆ ಗ್ರಾಸ ಒದಗಿಸಿದೆ.

Vijaya Karnataka Web 23 Jan 2021, 7:07 pm
ಚಿಕ್ಕಮಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಪತನಗೊಳಿಸಿ ಬಿಜೆಪಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ನಗರ ಹೊರವಲಯದ ಸೆರಾಯ್‌ ರೆಸಾರ್ಟ್‌ನಲ್ಲಿ ಶುಕ್ರವಾರ ಮಧ್ಯರಾತ್ರಿ ಗುಪ್ತಸಭೆ ನಡೆದಿರುವುದು ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
Vijaya Karnataka Web ರಮೇಶ್‌ ಜಾರಕಿಹೊಳಿ
ರಮೇಶ್‌ ಜಾರಕಿಹೊಳಿ


ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಸ್ಫೋಟಗೊಂಡಿರುವಾಗ ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆ ಮಹತ್ವ ಪಡೆದುಕೊಂಡಿದೆ. ಸಚಿವರಾದ ಸಿ.ಪಿ. ಯೋಗೀಶ್ವರ್‌, ಗೋಪಾಲಯ್ಯ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಕೂಡ ರಮೇಶ್‌ ಜಾರಕಿಹೊಳಿ ಜತೆಗಿದ್ದರು.

ಜ.23ರಂದು ಸಚಿವ ರಮೇಶ್‌ ಜಾರಕಿಹೊಳಿ ಪ್ರಗತಿ ಪರಿಶೀಲನಾ ಸಭೆ ನಿಗದಿಯಾಗಿತ್ತು. ಆದರೆ, ಶುಕ್ರವಾರ ರಾತ್ರಿ ಗುಪ್ತಸಭೆ ನಡೆಸಿದ ರಮೇಶ್‌ ಜಾರಕಿಹೊಳಿ ಶನಿವಾರ ನಿಗದಿಯಾಗಿದ್ದ ಪ್ರಗತಿ ಪರಿಶೀಲನಾ ಸಭೆ ದಿಢೀರ್‌ ರದ್ದುಗೊಳಿಸಿದ್ದು, ಚರ್ಚೆಗೆ ಗ್ರಾಸ ಒದಗಿಸಿದೆ.

ಕನ್ಫ್ಯೂಸ್‌ ಮಾಡ್ಬೇಡಿ

ಸೆರಾಯ್‌ ರೆಸಾರ್ಟ್‌ನಲ್ಲಿ ಯಾವುದೇ ರಾಜಕೀಯ ಸಭೆ ಮಾಡಿಲ್ಲ. ಎತ್ತಿನಹೊಳೆ ಯೋಜನೆ ಬಗ್ಗೆ ಸಭೆ ನಡೆಸಿದ್ದೇನೆ ಅಷ್ಟೆ. ಮಾಧ್ಯಮದವರು ಬಹಳ ಕನ್ಫ್ಯೂಸ್‌ ಮಾಡಬೇಡಿ ಎಂದು ಸಚಿವ ರಮೇಶ್‌ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಎತ್ತಿನಹೊಳೆ ಯೋಜನೆಯ ಮುಂದುವರಿದ ಕಾಮಗಾರಿ ಬಗ್ಗೆ ಖಾಸಗಿ ರೆಸಾರ್ಟ್‌ನಲ್ಲಿನನ್ನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿಲ್ಲ. ದಿ.ಸಿದ್ದಾರ್ಥ ಹೆಗ್ಡೆ ನನ್ನ ಮಿತ್ರರಾಗಿದ್ದರು. ಎಸ್‌.ಎಂ.ಕೃಷ್ಣ ನನ್ನ ರಾಜಕೀಯ ಗುರುಗಳು. ಅವರ ಮಾಲೀಕತ್ವದ ರೆಸಾರ್ಟ್‌ನಲ್ಲಿ ಸಭೆ ನಡೆಸಲಾಯಿತು ಎಂದು ರಮೇಶ್‌ ಜಾರಕಿಹೊಳಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ