ಆ್ಯಪ್ನಗರ

ಮಾನವೀಯತೆ ಮೆರೆದ ಬಿಜೆಪಿ ಶಾಸಕ ಸಿ.ಟಿ. ರವಿ

ಅಪಘಾತದಲ್ಲಿ ಗಾಯಗೊಂಡವರಿಗೆ ಶಾಸಕ ರವಿ ನೆರವು ನೀಡಿದ್ದಾರೆ.

Vijaya Karnataka Web 4 Oct 2017, 6:36 pm
ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ಬಿಜೆಪಿ ಶಾಸಕ ಸಿ.ಟಿ. ರವಿ ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
Vijaya Karnataka Web bjp mla c t ravi helps accident victims
ಮಾನವೀಯತೆ ಮೆರೆದ ಬಿಜೆಪಿ ಶಾಸಕ ಸಿ.ಟಿ. ರವಿ


ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್‌ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ.ಟಿ. ರವಿ ತಮ್ಮ ಕಾರನ್ನು ನಿಲ್ಲಿಸಿ ಮಾಹಿತಿ ಪಡೆದುಕೊಂಡರು.



ಬಲೆನೋ ಹಾಗೂ ಸ್ವಿಫ್ಟ್‌ ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಆ ಇಬ್ಬರನ್ನು ತಮ್ಮ ಕಾರಿನಲ್ಲಿಯೇ ಮೂಡಿಗೆರೆ ಆಸ್ಪತ್ರೆಗೆ ಕೊಂಡೊಯ್ದು ದಾಖಲು ಮಾಡಿದರು.

ಶಾಸಕರ ಮಾನವೀಯತೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Bjp Mla C.T. Ravi helps accident victims

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ