ಆ್ಯಪ್ನಗರ

ಹತಾಶೆಯಿಂದ ಕಾಂಗ್ರೆಸ್‌ ವಿರುದ್ಧ ಆರೋಪ

ಸ್ಥಳೀಯ ಸಂಸ್ಥೆ ಚುನಾವಣೆಯ ಕರಡು ಮತದಾರರ ಪಟ್ಟಿಯ ಗೊಂದಲಕ್ಕೆ ಕಾಂಗ್ರೆಸ್‌ ಕಾರಣ ಎಂದು ಬಿಜೆಪಿ ಮುಖಂಡರು ಆರೋಪಿಸಿರುವುದು ಹತಾಶೆಯ ಪ್ರತೀಕ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಮಂಜೇಗೌಡ ತಿರುಗೇಟು ನೀಡಿದ್ದಾರೆ.

Vijaya Karnataka 18 Dec 2018, 5:00 am
ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆ ಚುನಾವಣೆಯ ಕರಡು ಮತದಾರರ ಪಟ್ಟಿಯ ಗೊಂದಲಕ್ಕೆ ಕಾಂಗ್ರೆಸ್‌ ಕಾರಣ ಎಂದು ಬಿಜೆಪಿ ಮುಖಂಡರು ಆರೋಪಿಸಿರುವುದು ಹತಾಶೆಯ ಪ್ರತೀಕ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ.ಮಂಜೇಗೌಡ ತಿರುಗೇಟು ನೀಡಿದ್ದಾರೆ.
Vijaya Karnataka Web charges against congress from frustration
ಹತಾಶೆಯಿಂದ ಕಾಂಗ್ರೆಸ್‌ ವಿರುದ್ಧ ಆರೋಪ


ನಗರಸಭೆಯ ಮತದಾರರ ಪಟ್ಟಿಯಲ್ಲಿ ಆಗಿರುವ ಗೊಂದಲಗಳಿಗೆ ಕಾಂಗ್ರೆಸ್‌ ಕಾರಣ ಎಂಬ ಹಸಿ ಸುಳ್ಳು ಹೇಳುವ ಮೂಲಕ ತಮ್ಮ ಹತಾಶೆಯನ್ನು ಬಿಜೆಪಿ ಪ್ರಧಾನ ಕಾರ‍್ಯದರ್ಶಿ ಎಚ್‌.ಡಿ.ತಮ್ಮಯ್ಯ, ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್‌ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು ನಗರಸಭೆಯಲ್ಲಿ 13 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಹಾಗೂ ಕ್ಷೇತ್ರದ ಶಾಸಕರು ತಮಗೆ ಬೇಕಾದಂತೆ ಕ್ಷೇತ್ರ ವಿಂಗಡಣೆ ಮಾಡುವ ರಾಜಕಾರಣ ಮಾಡಿದವರು. ಮತದಾರರ ಪಟ್ಟಿ ಗೊಂದಲದ ಬಗ್ಗೆ ಸಾರ್ವಜನಿಕರು, ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ತಪ್ಪು ಯಾರು ಮಾಡಿದ್ದಾರೆ ಎಂದು ಆರೋಪ ಮಾಡುವ ಬದಲು ಸರಿಪಡಿಸುವ ಪ್ರಯತ್ನಕ್ಕೆ ಮುಂದಾಗಲಿ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಯಾವತ್ತೂ ಯಾವುದೇ ಧರ್ಮ, ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುವುದಿಲ್ಲ. ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನೇ ಹೇಗೆ ಹಾಳು ಮಾಡಿದೆ ಎಂಬುದು ದೇಶದ ಜನರಿಗೆ ಗೊತ್ತಿದೆ. ಕಾಂಗ್ರೆಸ್‌ ಪಕ್ಷದ ಮೇಲೆ ವೃಥಾ ಆರೋಪ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ