ಆ್ಯಪ್ನಗರ

ಮಕ್ಕಳ ದೌರ್ಜನ್ಯ ಅಕ್ಷಮ್ಯ

ಮಕ್ಕಳ ಮೇಲಿನ ದೌರ್ಜನ್ಯಗಳು ಸಮಾಜದಲ್ಲಿ ತಲೆತಗ್ಗಿಸುವಂತಹ ವಿಚಾರ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ್‌ ಎಂ. ಅಡಿಗ ಹೇಳಿದರು.

Vijaya Karnataka 30 Jan 2019, 5:00 am
ಚಿಕ್ಕಮಗಳೂರು: ಮಕ್ಕಳ ಮೇಲಿನ ದೌರ್ಜನ್ಯಗಳು ಸಮಾಜದಲ್ಲಿ ತಲೆತಗ್ಗಿಸುವಂತಹ ವಿಚಾರ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ್‌ ಎಂ. ಅಡಿಗ ಹೇಳಿದರು.
Vijaya Karnataka Web CKM-29rudrap11


ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಇಲಾಖೆ, ಸಾರ್ವಜನಿಕ ಶಿಕ್ಷ ಣ ಇಲಾಖೆ ಹಾಗೂ ಪ್ರಾಜೆಕ್ಟ್ ಸಿಎಸಿಎ, ನ್ಯೂ ದೆಹಲಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ಇಂತಹ ಕೃತ್ಯಗಳು ಸುಶಿಕ್ಷಿತರಿಂದಲೇ ಆಗುತ್ತಿರುವುದು ವಿಷಾದನೀಯ. ಸಾಮಾನ್ಯವಾಗಿ ಮಕ್ಕಳಿಗೆ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಈ ಬಗ್ಗೆ ಪೋಷಕರು ಸಹ ತಿಳುವಳಿಕೆ ನೀಡಲು ಸಂಕೋಚ ಪಡುತ್ತಾರೆ. ಶಿಕ್ಷ ಕರು ಮಕ್ಕಳಿಗೆ ಸಂಕೇತಗಳ ಮೂಲಕ ಲೈಂಗಿಕ ದೌರ್ಜನ್ಯದ ಬಗ್ಗೆ ಸಾಧ್ಯವಾದಷ್ಟು ಅರಿವು ಮೂಡಿಸಬೇಕು. ಮಾಧ್ಯಮಗಳೂ ಸಹ ಅರಿವಿನ ಬಗ್ಗೆ ಪ್ರಚಾರ ಮಾಡಬೇಕು ಎಂದರು.

ಡಿಡಿಪಿಐ ಎಸ್‌.ಎಸ್‌.ಪ್ರಸನ್ನ ಕುಮಾರ್‌ ಮಾತನಾಡಿ, ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಶಾಲೆ ಹಂತದಲ್ಲಿ ಮಕ್ಕಳಿಗೆ ಮಾಹಿತಿ ನೀಡುತಿದ್ದು, ಅಲ್ಲದೆ ಪೋಕ್ಸೋ ಕಾಯಿದೆ ಹಾಗೂ ಶಿಕ್ಷೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಆದರೂ ಇಂತಹ ಹೇಯ ಕೃತ್ಯಗಳು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚುತ್ತಿರುವುದು ಬೇಸರದ ಸಂಗತಿ. ಪ್ರತಿ ಶಾಲೆಯಲ್ಲಿ ಪೋಷಕರ ಸಭೆ ಕರೆದು ಅವರಿಗೆ ಪೋಕ್ಸೋ ಕಾಯಿದೆಯ ಮಹತ್ವದ ಬಗ್ಗೆ ತಿಳಿಸಿ ಅರಿವು ಮೂಡಿಸುವಂತಹ ಕೆಲಸವನ್ನು ಶಿಕ್ಷ ಕರು ಮಾಡಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಮಕ್ಕಳು ತಮ್ಮ ಮೇಲಾದ ದೌರ್ಜನ್ಯದ ಬಗ್ಗೆ ಪೋಷಕರಿಗೆ ಅಥವಾ ಶಿಕ್ಷ ಕರಿಗೆ ತಿಳಿಸುವ ಮೂಲಕ ಕಾನೂನು ಅಡಿಯಲ್ಲಿ ಅವರಿಗೆ ಶಿಕ್ಷಿಸಲು ಮುಂದಾಗಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ ಚೇಂಗಟಿ ಪ್ರಸ್ತಾವಿಸಿ, ಸ್ವಾಗತಿಸಿದರು.

ಸರಕಾರಿ ಸಹಾಯಕ ಅಭಿಯೋಜಕ ರಾಘವೇಂದ್ರ ರಾಯ್ಕರ್‌ ಪೋಕ್ಸೋ ಕಾಯಿದೆಯ ಬಗ್ಗೆ ಹಾಗೂ ಸಿಎಸಿಎ ಯೋಜನೆ ನಿರ್ದೇಶಕ ಪ್ರದೀಪ್‌ ಅನುಷ್ಠಾನದ ಬಗ್ಗೆ ಉಪನ್ಯಾಸ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ