ಆ್ಯಪ್ನಗರ

ಚಿಕ್ಕಮಗಳೂರು: ಕೊರೊನಾ ಸೋಂಕು ತಗುಲಿದೆ ಎಂದು ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಕೊರೊನಾ ಶಂಕೆ ಇರುವ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Vijaya Karnataka Web 24 May 2020, 12:44 pm
ಚಿಕ್ಕಮಗಳೂರು: ನಗರದ ಐಸೊಲೇಷನ್ ವಾರ್ಡ್‌ನಲ್ಲಿದ್ದ ಕೊರೊನಾ ಶಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶೌಚಾಲಯದಲ್ಲಿ ನೇಣುಬಿಗಿದುಕೊಂಡು ಭಾನುವಾರ ಸಾವಿಗೆ ಶರಣಾಗಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ 53 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರು ಚಿಕ್ಕಮಗಳೂರು ನಗರದ ಜಿಲ್ಲಾ ಆಸ್ಪತ್ರೆಯ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಯಕ್ತಿಯ ಗಂಟಲು ದ್ರವ , ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಕೊರೊನಾ ಸೋಂಕು ತಗುಲಿರುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಕೊರೊನಾ ನೆಗೆಟಿವ್ ಬಂದಿದೆ. ಇವರು ಮಹಾರಾಷ್ಟ್ರದಿಂದ ಬಂದವರ ಸಂಪರ್ಕದಲ್ಲಿ ಇರಲಿಲ್ಲ. ಮೂಲವ್ಯಾಧಿ, ರಕ್ತಸ್ರಾವ ಇದ್ದ ಕಾರಣ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಳಗ್ಗೆ ವೈದ್ಯರು ತಪಾಸಣೆಗೆ ಬಂದಾಗ ಶೌಚಾಲಯಕ್ಕೆ ಹೋಗಿದ್ದರು. 9.30 ಕ್ಕೆ ಪುನಃ ತಪಾಸಣೆ ನಡೆಸುವಾಗ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಕಾಫಿ ನಾಡಿಗೆ ಶಾಕ್‌ ನೀಡಿದ ಮುಂಬಯಿ: ಒಂದೇ ದಿನ ಐವರಲ್ಲಿ ಕೊರೊನಾ ಸೋಂಕು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ