ಆ್ಯಪ್ನಗರ

ಭ್ರಷ್ಟಾಚಾರಿಗಳೆಲ್ಲಾ ಒಂದಾಗುತ್ತಿದ್ದಾರೆ : ಟೀಕೆ

ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರಿಗಳ ವಿರುದ್ಧ ಇದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರೆಲ್ಲಾ ಒಂದಾಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ವಿಪಕ್ಷಗಳ ವಿರುದ್ಧ ವಿರೋಕ್ಷವಾಗಿ ಟೀಕಿಸಿದರು.

Vijaya Karnataka Web 27 Jul 2018, 5:00 am
ಚಿಕ್ಕಮಗಳೂರು : ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರಿಗಳ ವಿರುದ್ಧ ಇದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರೆಲ್ಲಾ ಒಂದಾಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ವಿಪಕ್ಷಗಳ ವಿರುದ್ಧ ವಿರೋಕ್ಷವಾಗಿ ಟೀಕಿಸಿದರು.
Vijaya Karnataka Web CKM-26RUDRAP8


ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಹಾಗೂ ಮುಂಬರುವ ಲೋಕಸಭೆ ಚುನಾವಣೆಯ ಸಿದ್ಧತಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲ ಪ್ರತಿ ಪಕ್ಷಗಳು ಮೋದಿ ಸೋಲಿಸಬೇಕು ಎಂದು ಪಣ ತೊಟ್ಟಿವೆ. ಅದೇ ರೀತಿ ಪಾಕಿಸ್ತಾನ ಮತ್ತು ಚೀನಾ ದೇಶಗಳು ಕೂಡ ಮೋದಿ ಸೋಲಬೇಕು ಎಂದು ಅಪೇಕ್ಷಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರೆಲ್ಲಾ ಹೆಚ್ಚಿನ ಶ್ರಮಹಾಕಿ ಪಕ್ಷ ಸಂಘಟಿಸಬೇಕು. ಜನರಿಗೆ ತಿಳಿವಳಿಕೆ ಮೂಡಿಸಬೇಕು ಎಂದರು.

ದೇಶವನ್ನು ಪ್ರಪಂಚದಲ್ಲೇ ಮುನ್ನೆಲೆಗೆ ತರಬೇಕು ಎಂದು ಮೋದಿ ಪ್ರಯತ್ನಿಸುತ್ತಿದ್ದಾರೆ. ಅವರು ಭ್ರಷ್ಟಾಚಾರಿಗಳ ವಿರುದ್ಧ ಇದ್ದಾರೆ. ಎಲ್ಲಿ ನಮ್ಮ ಬುಡಕ್ಕೆ ಬಂದು ಬಿಡುತ್ತೆ ಎಂಬ ಭಯದಿಂದ ಅವರೆಲ್ಲಾ ಚುನಾವಣೆಯಲ್ಲಿ ಒಂದಾಗಿದ್ದಾರೆ ಎಂದು ಪರೋಕ್ಷವಾಗಿ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು. ಪ್ರತಿಪಕ್ಷದಲ್ಲೂ ಒಳ್ಳೆಯವರಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ಕಾರ್ಗಿಲ್‌ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹ ಸಂಚಾಲಕ ಸಂತೋಷ್‌, ಶಾಸಕರಾದ ಬೆಳ್ಳಿ ಪ್ರಕಾಶ್‌, ಎಂ.ಪಿ.ಕುಮಾರಸ್ವಾಮಿ, ಸುರೇಶ್‌, ಜಿ.ಪಂ. ಅಧ್ಯಕ್ಷೆ ಸುಜಾತ, ಬಿಜೆಪಿ ಜಿಲ್ಲಾಧ್ಯಕ್ಷ ಡಿ.ಎನ್‌.ಜೀವರಾಜ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ