ಆ್ಯಪ್ನಗರ

ಬಂಡಿಮಠದ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಆಗ್ರಹ

ಭದ್ರಾನದಿ ಸೇತುವೆ ಪಕ್ಕದಲ್ಲಿನ ಬಂಡಿಮಠದಲ್ಲಿ ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಿದ್ದು ,ಇದೀಗ ಭದ್ರಾನದಿ ಸೇತುವೆ ಕಾಮಗಾರಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಸುಮಾರು 25 ಮನೆ ತೆರವುಗೊಳಿಸಬೇಕಾಗಿದೆ. ಹಾಗಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

Vijaya Karnataka 24 Jul 2019, 5:00 am
ಬಾಳೆಹೊನ್ನೂರು: ಭದ್ರಾನದಿ ಸೇತುವೆ ಪಕ್ಕದಲ್ಲಿನ ಬಂಡಿಮಠದಲ್ಲಿ ಹಲವು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಿದ್ದು ,ಇದೀಗ ಭದ್ರಾನದಿ ಸೇತುವೆ ಕಾಮಗಾರಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಸುಮಾರು 25 ಮನೆ ತೆರವುಗೊಳಿಸಬೇಕಾಗಿದೆ. ಹಾಗಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
Vijaya Karnataka Web CKM-23BHR2


ಬನ್ನೂರು ಶ್ರೀವಿದ್ಯಾಗಣಪತಿ ಸಮುದಾಯಭವನದಲ್ಲಿ ಮಂಗಳವಾರ ಬನ್ನೂರು ಗ್ರಾ.ಪಂ. ಮೊದಲ ಹಂತದ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದರು. ಗ್ರಾಮದಲ್ಲಿ ಅಂಬೇಡ್ಕರ್‌ ಸಮುದಾಯಭವನ ನಿರ್ಮಾಣಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಅನುಷ್ಟಾನಗೊಂಡಿಲ್ಲ ಎಂದು ದೂರಿದರು.

ಜಿ.ಪಂ.ಸದಸ್ಯೆ ಚಂದ್ರಮ್ಮ ಮಾತನಾಡಿ, ಗ್ರಾ.ಪಂ.ವ್ಯಾಪ್ತಿಯ ವಸತಿ ಮನೆಗಳನ್ನು ಆದಷ್ಟು ಬೇಗ ನಿರ್ಮಿಸಿಕೊಳ್ಳಬೇಕು. ಅಲ್ಲದೆ ಬಂಡಿಮಠ ಹತ್ತಿರದ ಭದ್ರಾಸೇತುವೆ ಪಕ್ಕದ ನಿವಾಸಿಗಳು ಮನೆ ತೆರವು ಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧÜಪಟ್ಟ ಇಲಾಖೆ ಹಾಗೂ ಶಾಸಕರೊಂದಿಗೆ ಚರ್ಚಿಸಿ ಸೂಕ್ತ ಬದಲಿ ವ್ಯವಸ್ಥೆ ಮಾಡಲಾಗುವುದು. ಜಿ.ಪಂ.ವತಿಯಿಂದ ಗಂಗಾಕಲ್ಯಾಣ ಯೋಜನೆ, ಮತ್ತು ಮಹಿಳಾ ಸಂಘಕ್ಕೆ ಸ್ವ ಉದ್ಯೋಗ ಕೈಗೊಳ್ಳಲು ಸುಮಾರು 2ರಿಂದ ಮೂರು ಲಕ್ಷ ಸಹಾಯ ಧನವಿದ್ದು ,ಅದರ ಸದುಪಯೋಗ ಪಡೆಯಬೇಕೆಂದರು.

ಗ್ರಾ.ಪಂ.ಅಧ್ಯಕ್ಷ ಟಿ.ಎಂ.ವೆಂಕಟೇಶ್‌ ಮಾತನಾಡಿ, ಬನ್ನೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಸೂಕ್ತ ಕಸ ವಿಲೇವಾರಿ ಪದ್ಧತಿ ಅಳವಡಿಸಿಕೊಂಡು ಸ್ವಚ್ಛ ಪರಿಸರ ಕಾಪಾಡಿಕೊಳ್ಳಬೇಕು ಹಾಗೂ ಕಂದಾಯ ಮತ್ತು ತೆರಿಗೆಯನ್ನು ಸಕಾಲದಲ್ಲಿ ಪಾವತಿಸಿ ಪಂಚಾಯಿತಿಯ ಅಭಿವೃದ್ಧಿಗೆ ಸಹಕರಿಸಬೇಕೆಂದರು.

ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಸುಜಾತ ರವರು ಗ್ರಾಮ ಸಭೆಯಲ್ಲಿ 2019-20ನೇ ಸಾಲಿನ ವಿವಿಧ ಯೋಜನೆ ಮತ್ತು ಇಲಾಖೆಗಳ ಫಲಾನುಭವಿಗಳ ಆಯ್ಕೆ, ಸರಕಾರದ ಮಾರ್ಗಸೂಚಿಯಂತೆ ನಿವೇಶನ ಮತ್ತು ಕಟ್ಟಡಗಳ ತೆರಿಗೆಗಳನ್ನು ವೈಜ್ಞಾನಿಕವಾಗಿ ಪರಿಷ್ಕರಣೆ ಮಾಡುವ ವಿಚಾರ, 2018-19ನೇ ಸಾಲಿನ ಬಸವ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.ಶಿಕ್ಷ ಣ, ಕೃಷಿ, ತೋಟಗಾರಿಕೆ, ಪಶುವೈದ್ಯ, ಸಾಮಾಜಿಕ ಅರಣ್ಯ, ಆರೋಗ್ಯಇಲಾಖೆ, ಅರಣ್ಯ, ಕಂದಾಯ, ಮಹಿಳಾ ಮತ್ತು ಶಿಶುಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ಕೆ.ಪಿ.ಶ್ಯಾಮಲಾ, ಮಾರ್ಗದರ್ಶಿ ಅಧಿಕಾರಿ ಮಲ್ಲಪ್ಪ, ಗ್ರಾ.ಪಂ.ಮಾಜಿ ಅಧ್ಯಕ್ಷ ಎಚ್‌.ಎಂ.ಪ್ರಶಾಂತ್‌, ಸದಸ್ಯ ಗೋವಿಂದರಾಜು, ಸರೋಜಮ್ಮ, ಶಶಿಕಲಾ, ಪವಿತ್ರ, ತಾ.ಪಂ.ಸದಸ್ಯೆ ಬಾಗ್ಯಲಕ್ಷ್ಮಿ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ