ಆ್ಯಪ್ನಗರ

ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಮಳೆ ಇಲ್ಲದೆ ಅಂತರ್ಜಲ ಬತ್ತಿ ಹೋಗಿದೆ. ಕುಡಿವ ನೀರಿಗೆ ಹಾಹಾಕಾರ ಉಂಟಾಗಿದ್ದು ಕೂಡಲೇ ಕರ್ನಾಟಕ ರಾಜ್ಯವನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಫಾರ್ಮರ್‌ ಅಸೋಸಿಯೇಷನ್‌ ಮತ್ತು ಗ್ರೀನ್‌ ಆರ್ಮಿ ಇಂಡಿಯಾ ಕಾರ್ಯಾಧ್ಯಕ್ಷ ಬಿ.ಸಿ.ದಯಾಕರ ಆಗ್ರಹಿಸಿದರು.

Vijaya Karnataka 21 May 2019, 5:00 am
ಚಿಕ್ಕಮಗಳೂರು : ಮಳೆ ಇಲ್ಲದೆ ಅಂತರ್ಜಲ ಬತ್ತಿ ಹೋಗಿದೆ. ಕುಡಿವ ನೀರಿಗೆ ಹಾಹಾಕಾರ ಉಂಟಾಗಿದ್ದು ಕೂಡಲೇ ಕರ್ನಾಟಕ ರಾಜ್ಯವನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಫಾರ್ಮರ್‌ ಅಸೋಸಿಯೇಷನ್‌ ಮತ್ತು ಗ್ರೀನ್‌ ಆರ್ಮಿ ಇಂಡಿಯಾ ಕಾರ್ಯಾಧ್ಯಕ್ಷ ಬಿ.ಸಿ.ದಯಾಕರ ಆಗ್ರಹಿಸಿದರು.
Vijaya Karnataka Web CKM-20RUDRAP1


ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಸಿವು, ನಿರುದ್ಯೋಗ, ಬಡತನ, ಬರಗಾಲ ಮತ್ತಿತರ ಜ್ವಲಂತ ಸಮಸ್ಯೆಗಳು ದೇಶದಲ್ಲಿ ಜನರನ್ನು ಕಿತ್ತು ತಿನ್ನುತ್ತಿವೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆಯಾಗಿ ಕುಡಿವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈ ಸಂದರ್ಭ ರಾಜ್ಯವನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದರು.

ಸಾರ್ವಜನಿಕರ ಸಮಸ್ಯೆ ಪರಿಹರಿಸುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಚುನಾಣೆಗೆ ತೋರುವ ಆಸಕ್ತಿಯನ್ನು ದೇಶದ ಅಭಿವೃದ್ಧಿ ವಿಚಾರದಲ್ಲಿ ಅವರು ತೋರದಿರುವುದು ವಿಪರ್ಯಾಸ ಎಂದು ಹೇಳಿದರು.

ಕೃಷಿ ವಲಯ ದೇಶದ ಬೆನ್ನೆಲುಬಾಗಿರುವುದರಿಂದ ಕೃಷಿ ಚಟುವಟಿಕೆಗಾಗಿ ಯಂತ್ರೋಪಕರಣಗಳಾದ ಟ್ರ್ಯಾಕ್ಟರ್‌, ಟಿಲ್ಲರ್‌, ಮೋಟರ್ಸ್‌, ಜೀಪು, ಪಿಕಪ್‌ ವಾಹನ, ಪೈಪ್‌ ಮತ್ತಿತರ ಸಾಮಗ್ರಿಗಳು, ಗೊಬ್ಬರ ಕೀಟನಾಶಕಗಳನ್ನು ರೈತರಿಗೆ ರಿಯಾಯಿತಿ ದರದಲ್ಲಿ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕುಡಿವ ನೀರು ಮತ್ತು ನೀರಾವರಿಗೆ ಶಾಶ್ವತ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.

ಅರಣ್ಯ ಮತ್ತು ಕಂದಾಯ ಭೂಮಿ ಜಂಟಿ ಸರ್ವೆ ಮಾಡುತ್ತಿರುವುದು ಸ್ವಾಗತಾರ್ಹ. ಕೆಲವರು ಸರ್ವೆ ಮಾಡುತ್ತಿರುವುದನ್ನು ವಿರೋಧಿಸುತ್ತಿರುವುದು ಸರಿಯಲ್ಲ. ಮಲೆನಾಡು ಭಾಗದಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ದೇಶದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಒಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿದರು.

ಸಂಚಾಲಕ ಸುಧೀರ್‌, ಪ್ರಧಾನ ಕಾರ್ಯದರ್ಶಿ ನಾಗರಾಜ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ