ಆ್ಯಪ್ನಗರ

ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಒತ್ತಾಯ

ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಬಿವಿಎಸ್‌ ಮತ್ತು ಪ್ರಗತಿಪರ ಚಿಂತಕರು ಸೋಮವಾರ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Vijaya Karnataka 11 Sep 2019, 5:00 am
ಮೂಡಿಗೆರೆ: ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಬಿವಿಎಸ್‌ ಮತ್ತು ಪ್ರಗತಿಪರ ಚಿಂತಕರು ಸೋಮವಾರ ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
Vijaya Karnataka Web demands of physical education teachers
ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆ ಈಡೇರಿಸಲು ಒತ್ತಾಯ


ದೈಹಿಕ ಶಿಕ್ಷಣ ಶಿಕ್ಷಕರನ್ನು ಪೌಢ ಶಾಲೆಗಳಿಂದ ಪದವಿ ಪೂರ್ವ ಕಾಲೇಜುಗಳಿಗೆ ಬಡ್ತಿ ನೀಡಬೇಕು. ಪದವಿ ಪೂರ್ವ ಕಾಲೇಜಿನಲ್ಲಿದೈಹಿಕ ಶಿಕ್ಷಕರ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು. ಪ್ರೌಢ ಶಾಲೆಯ ವೃಂದ ನೇಮಕಾತಿ ತಿದ್ದುಪಡಿ ಮಾಡಿ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. ಬಿಪಿಇಡಿ ಮತ್ತು ಎಂಪಿಇಡಿ ಸ್ನಾತಕೋತ್ತರ ಪದವಿದಾರರನ್ನು ಉನ್ನತ ವ್ಯಾಸಂಗಕ್ಕೆ ಅವಕಾಶ ಮಾಡಿಕೊಡಬೇಕು. ಪ್ರೌಢಶಾಲೆಗಳಲ್ಲಿದೈಹಿಕ ಶಿಕ್ಷಣ ಶಿಕ್ಷಕರನ್ನು ನೂತನಾಗಿ ನೇಮಕ ಮಾಡಬೇಕು ಎಂಬ ಬೇಡಿಕೆ ಮುಂದಿರಿಸಿ ಈ ಸಾಲಿನ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ದೈಹಿಕ ಶಿಕ್ಷಣ ಶಿಕ್ಷಕರು ಬಹಿಷ್ಕರಿಸಿದ್ದಾರೆ.ಹಾಗಾಗಿ ರಾಜ್ಯ ಸರಕಾರ ಕೂಡಲೇ ಶಿಕ್ಷಕರ ಬೇಡಿಕೆ ಈಡೇರಿಸಬೇಕು ಎಂದು ಮನವಿಯಲ್ಲಿಒತ್ತಾಯಿಸಿದ್ದಾರೆ. ಅಭಿಜಿತ್‌, ಜಯಪಾಲ್‌, ಬಕ್ಕಿ ಮಂಜು, ಚಂದ್ರಶೇಖರ್‌ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ