ಆ್ಯಪ್ನಗರ

ಕೊರೊನಾ ಹಿನ್ನೆಲೆ, ಬ್ಯಾಂಕ್‌ಗಳ EMIಗೆ ವಿನಾಯಿತಿ ನೀಡುವಂತೆ ಸರಕಾರಕ್ಕೆ ಡಿಕೆಶಿ ಮನವಿ

ಕೊರೊನಾದಿಂದ ರಾಜ್ಯದ ಜನ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವ್ಯಾಪಾರಸ್ಥರು, ಸಣ್ಣ ಉದ್ಯಮೆದಾರರು ಕಷ್ಟದಲ್ಲಿದ್ದಾರೆ. ಬ್ಯಾಂಕುಗಳಿಂದ ಕಿರುಕುಳ ಅನುಭವಿಸುತ್ತಿದ್ದಾರೆ. ಇಎಂಐಗೆ ವಿನಾಯಿತಿ ನೀಡುವ ಈ ಪವಿತ್ರ ಕೆಲಸವನ್ನ ರಾಜ್ಯ ಸರ್ಕಾರ ತುರ್ತಾಗಿ ಮಾಡಲಿ ಎಂದು ಡಿಕೆಶಿ ಆಗ್ರಹಿಸಿದ್ದಾರೆ.

Vijaya Karnataka 19 Mar 2020, 12:45 pm

ಚಿಕ್ಕಮಗಳೂರು: ರಾಜ್ಯಾದ್ಯಂತ ಕೊರೊನಾ ವೈರಸ್‌ ಸೋಂಕಿನಿಂದ ಆರ್ಥಿಕ ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ನಾಗರಿಕರ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಸರಕಾರಕ್ಕೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಎಲ್ಲಾ ಬ್ಯಾಂಕುಗಳ ಸಾಲದ ಕಂತು (ಇಎಂಐ)ಗೆ ವಿನಾಯಿತಿ ನೀಡುವಂತೆ ಅವರು ಒತ್ತಾಯಿಸಿದ್ದಾರೆ.
Vijaya Karnataka Web DK Shivakumar


ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್‌, ಸಾಮಾನ್ಯ ಜನರಿಗೆ ಆರ್ಥಿಕವಾಗಿ ಉಸಿರಾಡಲೂ ಆಗುತ್ತಿಲ್ಲ. ಕೊರೊನಾದಿಂದ ರಾಜ್ಯದ ಜನ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವ್ಯಾಪಾರಸ್ಥರು, ಸಣ್ಣ ಉದ್ಯಮೆದಾರರು ತೀವ್ರ ಕಷ್ಟದಲ್ಲಿದ್ದಾರೆ. ಬ್ಯಾಂಕುಗಳಿಂದ ಕಿರುಕುಳ ಅನುಭವಿಸುತ್ತಿದ್ದಾರೆ. ಇಎಂಐಗೆ ವಿನಾಯಿತಿ ನೀಡುವ ಈ ಪವಿತ್ರ ಕೆಲಸವನ್ನ ರಾಜ್ಯ ಸರ್ಕಾರ ತುರ್ತಾಗಿ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.

ಕೊರೊನಾ ಭೀತಿ ನಡುವೆಯೂ ದೇಶಿ ವಿಮಾನ ಪ್ರಯಾಣಿಕರ ತಪಾಸಣೆ ಇಲ್ಲ!

ಜನರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ ರಾಜ್ಯದ ಜನರನ್ನು ಉಳಿಸುವುದು ಸರಕಾರದ ಕರ್ತವ್ಯ ಎಂದು ಅವರು ವಿವರಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರಿಂದ ಸ್ವಾಗತ

ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಎನ್‌.ಆರ್‌.ಪುರ ತಾಲೂಕಿನ ರಂಭಾಪುರಿ ಪೀಠಕ್ಕೆ ಆಗಮಿಸಿದ ಶಿವಕುಮಾರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಿದರು. ನಂತರ ರಂಭಾಪುರಿ ಪೀಠದ ವೀರಭದ್ರಸ್ವಾಮಿಗೆ ಡಿಕೆಶಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಡಾ.ವೀರಸೋಮೇಶ್ವರ ಜಗದ್ಗುರುಗಳ ಆರ್ಶಿವಾದ ಪಡೆದು, 15 ನಿಮಿಷಗಳ ಕಾಲ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಡಾ.ವೀರಸೋಮೇಶ್ವರ ಜಗದ್ಗರುಗಳು ಡಿಕೆಶಿಗೆ 119 ನೇ ರಂಭಾಪುರೀ ಪೀಠದ ವೀರ ಗಂಗಾಧರ ಜಗದ್ಗುರುಗಳ ಭಾವಚಿತ್ರ ನೀಡಿದರು. ಭಾವಚಿತ್ರ ಸ್ವೀಕರಿಸಿದ ಶಿವಕುಮಾರ್‌, “ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳೇ ನನ್ನ ಹೈಕಮಾಂಡ್. ಅಧ್ಯಕ್ಷರೇ, ಈ ಫೋಟೋವನ್ನು ಕೆಪಿಸಿಸಿಯಲ್ಲಿ ನನ್ನ ಛೇಂಬರ್‌ನಲ್ಲಿಡಿ,” ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಂಶುಮತ್‌ಗೆ ಸೂಚನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ