ಆ್ಯಪ್ನಗರ

ದತ್ತ ಮಾಲಾ-30ಸೆಕ್ಟರ್‌ ಮ್ಯಾಜಿಸ್ಪ್ರೇಟರ್‌ ನೇಮಕ

ದತ್ತ ಮಾಲಾ ಅಭಿಯಾನ ಕಾರ್ಯಕ್ರಮವನ್ನು ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಸಲು ಮೂವತ್ತು ವಿಶೇಷ ಕಾರ್ಯಾನಿರ್ವಾಹಕ ದಂಡಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಹೇಳಿದರು.

Vijaya Karnataka 27 Oct 2018, 5:00 am
ಚಿಕ್ಕಮಗಳೂರು : ದತ್ತ ಮಾಲಾ ಅಭಿಯಾನ ಕಾರ್ಯಕ್ರಮವನ್ನು ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಸಲು ಮೂವತ್ತು ವಿಶೇಷ ಕಾರ್ಯಾನಿರ್ವಾಹಕ ದಂಡಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಹೇಳಿದರು.
Vijaya Karnataka Web CKM-26rudrap5


ತಮ್ಮ ಕಚೇರಿ ಸಭಾಂಗಣದಲ್ಲಿ ವಿಶೇ‚‚ಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಗೆ ಶುಕ್ರವಾರ ಅಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಅವರು ಮಾತಾನಾಡಿದರು. ಅ.28 ರಂದು ನಡೆಯಲಿರುವ ದತ್ತ ಮಾಲಾ ಅಭಿಯಾನದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ತುರ್ತಾಗಿ ಕ್ರಮ ಕೈಗೊಳ್ಳಲು ಮೂವತ್ತು ವಿಶೇಷ ಕಾರ್ಯಾನಿರ್ವಾಹಕ ದಂಡಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸೂಕ್ಷ ್ಮ ಪ್ರದೇಶದಲ್ಲಿ ವಿಶೇಷ ದಂಡಾಧಿಕಾರಿಗಳನ್ನು ನಿಯೋಜಿಸುವುದರಿಂದ ಯಾವುದೇ ಅಹಿತಕರ ಘಟನೆ, ಘರ್ಷಣೆಗಳು ನಡೆಯದಂತೆ ಸ್ಥಳೀಯ ಪರಿಸ್ಥಿತಿಗನುಗುಣವಾಗಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಶಾಂತಿ ಭಂಗ ಉಂಟು ಮಾಡುವ ಯಾವುದೇ ವ್ಯಕ್ತಿಯನ್ನು ಪೊಲೀಸರು ಹಾಜರುಪಡಿಸಿದಾಗ ಅವರಿಂದ ಮುಖ್ಯ ಮುಚ್ಚಳಿಕೆ ಮತ್ತು ಶ್ಯೂರಿಟಿಗಳನ್ನು ನಿಗಧಿತ ಪ್ರಪತ್ರದಲ್ಲಿ ಪಡೆಯಬೇಕು. ಕೆಲವೊಮ್ಮೆ ಅವುಗಳನ್ನು ಕೊಡಲು ತಪ್ಪಿದಲ್ಲಿ ಅಂತವರನ್ನು ಜೈಲಿಗೆ ಕಳುಹಿಸುವ ಅಧಿಕಾರ ಇರುತ್ತದೆ ಎಂದರು.ದಂಡಾಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳದಲ್ಲಿ ತಮ್ಮ ಕರ್ತವ್ಯವನ್ನು ಕಾನೂನಿನ ಅಡಿಯಲ್ಲಿ ಚಾಚು ತಪ್ಪದೆ ಪಾಲಿಸಬೇಕು ಎಂದರು. ಪ್ರಭಾರ ಅಪರ ಜಿಲ್ಲಾಧಿಕಾರಿ ಶಿವಕುಮಾರ್‌, ವಿಶೇಷ ಕಾರ್ಯಾನಿರ್ವಾಹಕ ದಂಡಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ