ಆ್ಯಪ್ನಗರ

ಕಾರ್ಗಿಲ್‌ ವೀರರಿಗೆ ಮಾಜಿ ಸೈನಿಕರ ನಮನ

ಕಾರ್ಗಿಲ್‌ ವಿಜಯ ದಿನವನ್ನು ಮಾಜಿ ಸೈನಿಕರು ನಗರದ ಎಐಟಿ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ಸಂಭ್ರಮದಿಂದ ಆಚರಿಸಿದರು.

Vijaya Karnataka 29 Jul 2019, 5:00 am
ಚಿಕ್ಕಮಗಳೂರು: ಕಾರ್ಗಿಲ್‌ ವಿಜಯ ದಿನವನ್ನು ಮಾಜಿ ಸೈನಿಕರು ನಗರದ ಎಐಟಿ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ಸಂಭ್ರಮದಿಂದ ಆಚರಿಸಿದರು.
Vijaya Karnataka Web CKM-28SHIVU-P4


ವಿಜಯೋತ್ಸವದ ಅಂಗವಾಗಿ ರಾಷ್ಟ್ರಧ್ವಜ ಮತ್ತು ಮಿಲಿಟರಿ ಧ್ವಜದೊಂದಿಗೆ ಭಾರತ್‌ ಮಾತಾಕೀ ಜೈ, ವಂದೇ ಮಾತರಂ ಘೋಷಣೆ ಕೂಗುತ್ತಾ ಮಾಜಿ ಸೈನಿಕರು ಮತ್ತು ಅವರ ಕುಟುಂಬದವರು ಎಐಟಿ ವೃತ್ತದಿಂದ ಕಾಲೇಜಿನವರೆಗೆ ಮೆರವಣಿಗೆ ನಡೆಸಿದರು.

ಮೆರವಣಿಗೆಯಲ್ಲಿ ಸಾಗಿ ಬಂದ ಮಾಜಿ ಸೈನಿಕರನ್ನು ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ನಂತರ ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಗಳಿಗೆ ಮಾಜಿ ಸೈನಿಕರು ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಮಾತನಾಡಿ, ದೇಶ ಕಾಯುವ ಸೈನಿಕರು ನಮ್ಮ ನಿಜವಾದ ಹಿರೋಗಳು. ಅವರನ್ನು ಎಲ್ಲರೂ ಗೌರವಾದರಗಳಿಂದ ಕಾಣಬೇಕು. ವಿದ್ಯಾರ್ಥಿಗಳು ಮತ್ತು ಯುವ ಜನತೆಯಲ್ಲಿ ಸೈನಿಕರಾಗುವ ಮೂಲಕ ದೇಶ ಸೇವೆ ಮಾಡುವ ಮನೋಭಾವ ಬೆಳೆಯಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಯೋಧ ಪ್ರಕಾಶ್‌ ಶೆಟ್ಟಿ ಮಾತನಾಡಿ, ದೇಶದ ಗಡಿಯನ್ನು ತಮ್ಮ ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ಅದರ ರಕ್ಷ ಣೆಗಾಗಿ ತಮ್ಮ ಪ್ರಾಣಾರ್ಪಣೆ ಮಾಡುವ ಸೈನಿಕರನ್ನು ದೇಶದ ಜನತೆ ಮರೆಯಬಾರದು ಎಂದು ಹೇಳಿದರು.

ಇದೇ ಸಂದರ್ಭ ಕಾರ್ಗಿಲ್‌ ಯುದ್ಧದ ವಿಡಿಯೋ ಪ್ರದರ್ಶನ ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ನಂತರ ಮಾಜಿ ಸೈನಿಕರನ್ನು ಸನ್ಮಾನಿಸಿದರು. ಪ್ರಾಂಶುಪಾಲ ಕೆ.ಎಸ್‌.ಪ್ರಕಾಶ್‌ ರಾವ್‌ ಅಧ್ಯಕ್ಷ ತೆ ವಹಿಸಿದ್ದರು. ಪಾಲಿಟೆಕ್ನಿಕ್‌ ಪ್ರಾಂಶುಪಾಲ ಸಚ್ಚಿನ್‌, ಮಾಜಿ ಸೈನಿಕರಾದ ಕ್ಯಾಪ್ಟನ್‌ ಕೃಷ್ಣೇಗೌಡ, ಹವಾಲ್ದಾರ್‌ ದಿನೇಶ್‌, ಹೇಮರಾಜ್‌, ಮೋಹನ್‌, ಸುರೇಂದ್ರ, ಶಾಂತಪ್ಪ, ಪುಟ್ಟರಾಜು, ಅರುಣಾಚಲ, ಸೋಮಶೇಖರಪ್ಪ, ರವೀಂದ್ರ, ವಿನೋದ್‌ ಕುಮಾರ್‌, ಎಚ್‌.ಡಿ.ಸುರೇಶ್‌, ರೇವಣ್ಣ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ