ಆ್ಯಪ್ನಗರ

ಬಿಜೆಪಿ ಸರಕಾರದಿಂದ ದ್ವೇಷದ ರಾಜಕಾರಣ

ಲೋಕೋಪಯೋಗಿ ಇಲಾಖೆ ಮೂಲಕ ಕಳೆದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಮಂಜೂರು ಮಾಡಿದ್ದ ಕಾಮಗಾರಿಗಳಿಗೆ ತಡೆ ನೀಡುವ ಮೂಲಕ ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌.ದೇವರಾಜ್‌ ಆರೋಪಿಸಿದ್ದಾರೆ.

Vijaya Karnataka 15 Sep 2019, 5:00 am
ಚಿಕ್ಕಮಗಳೂರು: ಲೋಕೋಪಯೋಗಿ ಇಲಾಖೆ ಮೂಲಕ ಕಳೆದ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಮಂಜೂರು ಮಾಡಿದ್ದ ಕಾಮಗಾರಿಗಳಿಗೆ ತಡೆ ನೀಡುವ ಮೂಲಕ ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌.ದೇವರಾಜ್‌ ಆರೋಪಿಸಿದ್ದಾರೆ.
Vijaya Karnataka Web hate politics from bjp government
ಬಿಜೆಪಿ ಸರಕಾರದಿಂದ ದ್ವೇಷದ ರಾಜಕಾರಣ


ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸರಿಗೆ ಇಲಾಖೆಯ ಅಪರ ಮುಖ್ಯ ಕಾರ‍್ಯದರ್ಶಿ ಇತ್ತೀಚೆಗೆ ಇಲಾಖೆ ಅಧೀಕ್ಷಕರು, ಕಾರ‍್ಯಪಾಲಕ ಎಂಜಿನಿಯರ್‌ಗಳಿಗೆ ಪತ್ರ ಬರೆದು ಟೆಂಡರ್‌ ಕರೆಯದ, ಆದೇಶ ಹೊರಡಿಸಬೇಕಿರುವ, ಕಾರಾರ‍ಯದೇಶ ನೀಡಲು ಬಾಕಿ ಇರುವ ಕಾಮಗಾರಿಗಳ ಮುಂದಿನ ಯಾವುದೇ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಸೂಚಿಸಿದ್ದಾರೆ ಎಂದರು.

ಅಭಿವೃದ್ಧಿ ಕಾರ‍್ಯಗಳಿಗೆ ಹಿಂದಿನ ಸರಕಾರ ಬಿಡುಗಡೆ ಮಾಡಿದ್ದ ಅನುದಾನ ತಡೆಹಿಡಿಯಲಾಗಿದೆ. ಇದು ರಾಜ್ಯದ ಬೊಕ್ಕಸ ಖಾಲಿಯಾಗಿರುವುದಕ್ಕೆ ನಿದರ್ಶನ. ತಾನೂ ಅಭಿವೃದ್ಧಿ ಕೆಲಸ ಮಾಡದೆ, ಹಿಂದಿನ ಸರಕಾರ ಮಂಜೂರು ಮಾಡಿದ್ದ ಕಾಮಗಾರಿಗಳಿಗೂ ತಡೆಹಾಕಿ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ರಾಜ್ಯ ಸರಕಾರ ಹೊರಡಿಸಿರುವ ತಡೆ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ಪಕ್ಷದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ ಎಂದು ಎಚ್ಚರಿಸಿದರು.

ಸಚಿವ ಸಿ.ಟಿ.ರವಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಸಭೆ ನಡೆಸುವ ಮೂಲಕ ನಾಟಕವಾಡುತ್ತಿದ್ದಾರೆ. ಜಿಲ್ಲೆಯಲ್ಲಿಅತಿವೃಷ್ಟಿಯಿಂದ ಮಲೆನಾಡಿನ ಜನ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರೂ ನೆರವಿಗೆ ಬಂದಿಲ್ಲ. ತಕ್ಷಣ ಎಲ್ಲಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು. ಸಿಪಿಐ ಜಿಲ್ಲಾಕಾರ‍್ಯದರ್ಶಿ ಎಚ್‌.ಎಂ.ರೇಣುಕಾರಾಧ್ಯ, ರಾಧಾಸುಂದರೇಶ್‌ ಹಾಜರಿದ್ದರು.

--------------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ