ಆ್ಯಪ್ನಗರ

ಆರೋಗ್ಯ ಜಾಗೃತಿ ಅಗತ್ಯ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಆರೋಗ್ಯದ ಬಗ್ಗೆ ಜಾಗೃತಿ ವಹಿಸಿದಾಗ ಜೀವನದ ಗುರಿ ಮುಟ್ಟಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ಚೇಂಗಟಿ ಹೇಳಿದರು.

Vijaya Karnataka 9 Apr 2019, 5:00 am
ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಆರೋಗ್ಯದ ಬಗ್ಗೆ ಜಾಗೃತಿ ವಹಿಸಿದಾಗ ಜೀವನದ ಗುರಿ ಮುಟ್ಟಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ಚೇಂಗಟಿ ಹೇಳಿದರು.
Vijaya Karnataka Web CKM-8RUDRAP3


ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮುಗುಳವಳ್ಳಿ ವಿದ್ಯಾರ್ಥಿ ಪ್ಯಾರ ಮೆಡಿಕಲ್‌ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಆರೋಗ್ಯ ದಿನಾಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪರಿಸರ ಪ್ರೀತಿ ಮತ್ತು ಸಂರಕ್ಷ ಣೆ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ಸಲಹೆ ನೀಡಿದ ಅವರು, ವಿದ್ಯಾರ್ಥಿಗಳು ಪ್ರತಿ ವರ್ಷ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸಮಸ್ಯೆ ಇದ್ದರೆ ವೈದ್ಯರ ಬಳಿ ಮುಕ್ತವಾಗಿ ಮಾತನಾಡಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮುಂದೆ ರೋಗಿಗಳ ಸೇವೆ ಮಾಡುವ ಜತೆಗೆ ಸಮಾಜಕ್ಕೆ ಮಾದರಿಯಾಗಿ ಕೆಲಸ ಮಾಡಬೇಕು ಎಂದರು.

ಆರ್‌ಸಿಎಚ್‌ ಅಧಿಕಾರಿ ಭರತ್‌ಕುಮಾರ್‌ ಮಾತನಾಡಿ, ದೇಶದಲ್ಲಿ ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ, ಪ್ರತಿ ಹಳ್ಳಿಯಲ್ಲೂ ಉಚಿತವಾಗಿ ಸಿಗುವಂತಿರಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್‌.ಎಸ್‌.ವೆಂಕಟೇಶ್‌ ಮಾತನಾಡಿ, ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಲು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಬೇಕು. ಹಣ್ಣು, ತರಕಾರಿಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದರು.

ವಕೀಲ ಸುಜೇಂದ್ರ, ವಿದ್ಯಾರ್ಥಿ ಪ್ಯಾರಮೆಡಿಕಲ್‌ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹೊನ್ನಶೆಟ್ಟಿ, ಆಡಳಿತ ಅಧಿಕಾರಿ ಅರುಣ್‌ಕುಮಾರ್‌, ವೈದ್ಯೆ ಡಾ.ಸೀಮಾ, ಜಿಲ್ಲಾ ಆಯುಷ್‌ ಅಧಿಕಾರಿ ಗೀತ, ಶಿಕ್ಷ ಣಾಧಿಕಾರಿ ಸುಧಾಕರ್‌, ಹರ್ಷಅರಸ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ