ಆ್ಯಪ್ನಗರ

ಅಗತ್ಯವಿದ್ದಲ್ಲಿ ಮೇವು ಟ್ಯಾಂಕ್‌, ಗೋಶಾಲೆ

ಮುಂಬರುವ ಬೇಸಿಗೆಯಲ್ಲಿ ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 26 Jan 2019, 5:00 am
ಚಿಕ್ಕಮಗಳೂರು : ಮುಂಬರುವ ಬೇಸಿಗೆಯಲ್ಲಿ ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web CKM-25rudrap5


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆ,ಬೆಳೆ ಪರಿಸ್ಥಿತಿ, ಮಳೆಯ ಹಾನಿಯ ಬಗ್ಗೆ ಕೈಗೊಂಡ ಪರಿಹಾರ ಕ್ರಮದ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಬರಪೀಡಿತ ಭಾಗದಲ್ಲಿ ಕುಡಿವ ನೀರಿನ ತೊಂದರೆ ಇರುವ ಗ್ರಾಮಗಳನ್ನು ಪಟ್ಟಿ ಮಾಡಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಟೆಂಡರ್‌ ಕರೆಯಬೇಕು. ಕುಡಿವ ನೀರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಾನುವಾರುಗಳಿಗೆ ಮೇವಿನ ಲಭ್ಯತೆÜ ಬಗ್ಗೆ ಮಾಹಿತಿ ಪಡೆದು, ತೊಂದರೆ ಇರುವ ಕಡೆ ಮೇವು ಟ್ಯಾಂಕ್‌, ಅಗತ್ಯವಿದ್ದಲ್ಲಿ ಗೋಶಾಲೆ ತೆರೆಯಬೇಕು ಎಂದರು.

ಅತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ಹಾನಿಗೊಳಗಾದ ಸಾರ್ವಜನಿಕ ಸ್ವತ್ತುಗಳನ್ನು ಪುನಶ್ಚೇತನಗೊಳಿಸಲು 25 ಕೋಟಿ ರೂ.ಬಿಡುಗಡೆಯಾಗಿದೆ. ಅದರಲ್ಲಿ ಕೈಗೊಂಡಿರುವ 407 ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು.ಯಗಟಿ ಹೋಬಳಿ ಸುತ್ತಮತ್ತಲಿನಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ. ಈ ಬಗ್ಗೆ ಮೇಸ್ಕಾಂ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಮಳೆ ಕೊರತೆಯಿಂದ ತೆಂಗಿನ ಮರಗಳು ಒಣಗಿ ಹೋಗಿವೆ. ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅನುದಾನ ಬಂದಿದ್ದು, ವಿತರಣೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಎನ್‌ಆರ್‌ಇಜಿ ಯೋಜನೆಯಡಿ ತೆಂಗು ಪುನಶ್ಚೇತನಕ್ಕೆ ಉತ್ತೇಜಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಮಾತನಾಡಿ,ಜಿಲ್ಲೆಯಲ್ಲಿ ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಲು ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದ್ದು, ತುರ್ತು ನಿರ್ವಹಣೆಗೆ 25 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.ಜಿ.ಪಂ.ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸಿ.ಸತ್ಯಭಾಮ, ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ಪಾಂಡೆ, ಉಪವಿಭಾಗಾಧಿಕಾರಿ ಶಿವಕುಮಾರ್‌, ರೂಪ ಹಾಗೂ ಜಿಲ್ಲಾಮಟ್ಟದ ಅನುಷ್ಠಾನಾಧಿಕಾರಿಗಳು ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ