ಆ್ಯಪ್ನಗರ

ಸಾಂಕ್ರಾಮಿಕ ರೋಗ ಭೀತಿ : ನಗರಸಭೆಗೆ ಮನವಿ

ಇಂದಾವರದ ಕಸ ಸಂಗ್ರಹ ಘಟಕದಲ್ಲಿ ಸರಿಯಾಗಿ ಕಸ ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ನಗರಸಭೆಗೆ ಮನವಿ ಸಲ್ಲಿಸಿದರು.

Vijaya Karnataka 14 May 2019, 5:00 am
ಚಿಕ್ಕಮಗಳೂರು : ಇಂದಾವರದ ಕಸ ಸಂಗ್ರಹ ಘಟಕದಲ್ಲಿ ಸರಿಯಾಗಿ ಕಸ ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ನಗರಸಭೆಗೆ ಮನವಿ ಸಲ್ಲಿಸಿದರು.
Vijaya Karnataka Web CKM-13RUDRAP6


ಗ್ರಾಮದ ಮುಖಂಡರ ನೇತೃತ್ವದಲ್ಲಿ ಸೋಮವಾರ ಆಯುಕ್ತ ಪರಮೇಶ ಅವರನ್ನು ಭೇಟಿಯಾದ ಹಲವು ಗ್ರಾಮಸ್ಥರು ಇಂದಾವರ ಕಸ ಡಂಪ್‌ ಯಾರ್ಡ್‌ನಲ್ಲಿ ಕಸ ನಿರ್ವಹಣೆ ಕಾರ್ಯ ಸರಿಯಾಗಿ ನಡೆಯದ ಕಾರಣ ಇಡೀ ಪರಿಸರವೇ ದುರ್ನಾತ ಬೀರುತ್ತಿದೆ. ಸೊಳ್ಳೆಗಳು ಅವ್ಯಾಹತವಾಗಿ ಹಾರಾಡುತ್ತವೆ. ಮನೆಯೊಳಗೆ ಸೊಳ್ಳೆಗಳ ಹಾರಾಟ ಹೆಚ್ಚಾಗಿದೆ. ಈಗಾಗಲೇ ಗ್ರಾಮದಲ್ಲಿ ಹಲವರು ಕಾಯಿಲೆಯಿಂದ ಬಳಲುತ್ತಿದ್ದು, ಇದು ಸಾಂಕ್ರಾಮಿಕವಾಗುವ ಎಲ್ಲ ಲಕ್ಷಣಗಳಿವೆ ಎಂದು ಮನವರಿಕೆ ಮಾಡಿದರು.

ಕೂಡಲೇ ಸಮರ್ಪಕವಾಗಿ ಕಸ ವಿಲೇವಾರಿ ನಿರ್ವಹಣೆ ಮಾಡಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಎಲ್ಲ ಗ್ರಾಮಸ್ಥರು ಸೇರಿ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಆಯುಕ್ತ ಪರಮೇಶ್‌ ಅವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಗ್ರಾಮಸ್ಥರಾದ ಯತೀಶ್‌, ಹರ್ಷ, ಸಂದೀಪ್‌, ಪುನೀತ್‌, ರಂಜಿತ್‌, ಕಿರಣ್‌, ವಿನಯ್‌, ಸಚಿನ್‌, ನಿತಿನ್‌, ದೀಪು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ