ಆ್ಯಪ್ನಗರ

ಶೈಕ್ಷಣಿಕ ಸವಲತ್ತು ಸದುಪಯೋಗ ಆಗಲಿ

ಸರಕಾರ ಶಿಕ್ಷಣಕ್ಕೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಅನಿಲ್‌ಕುಮಾರ್‌ ಸಲಹೆ ಮಾಡಿದರು.

Vijaya Karnataka 13 Jan 2019, 5:00 am
ಚಿಕ್ಕಮಗಳೂರು : ಸರಕಾರ ಶಿಕ್ಷಣಕ್ಕೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಅನಿಲ್‌ಕುಮಾರ್‌ ಸಲಹೆ ಮಾಡಿದರು.
Vijaya Karnataka Web CKM-12ARAGAP5


ನಗರದ ಎಐಟಿ ಸರ್ಕಲ್‌ ಬಳಿ ಇರುವ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶನಿವಾರ ಮಲ್ಲೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಂಬಳೆಯ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣದ ಅಗತ್ಯವಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಶಿಕ್ಷಣ ಪಡೆದುಕೊಂಡು ಬದುಕು ರೂಪಿಸಿಕೊಳ್ಳಬೇಕು. ವಸತಿ ನಿಲಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಉತ್ತಮ ಆಹಾರವನ್ನೂ ನೀಡಬೇಕು. ಮುಂದಿನ ವರ್ಷದಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ‍್ಯಕ್ರಮಗಳಲ್ಲಿ ವಸತಿ ಶಾಲೆ ಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬೀಕನಹಳ್ಳಿ ಸೋಮಶೇಖರ್‌ ಮಾತನಾಡಿ, ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ನೀಡಬೇಕು. ಪೋಷಕರ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಬೇಕು. ಯಾವುದೇ ಕುಂದು ಕೊರತೆ ಇದ್ದರೂ ಸಮಿತಿಯಲ್ಲಿ ಚರ್ಚಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು. ಮಲ್ಲೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಶಿವಕುಮಾರ್‌, ಅಂಬಳೆಯ ಡಾ.ಬಿ.ಆರ್‌.ಅಂಬೇಡ್ಕರ್‌ ವಸತಿ ಶಾಲೆ ಪ್ರಭಾರಿ ಪ್ರಾಂಶುಪಾಲೆ ದೀಪ, ವಾರ್ಡನ್‌ ಮಧು ಹಾಜರಿದ್ದರು. ನಿರ್ಮಲ ಸ್ವಾಗತಿಸಿ, ರೇಖಾ ನಿರೂಪಿಸಿದರು. ಮಂಜುನಾಥ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ