ಆ್ಯಪ್ನಗರ

ವಚನಕಾರರ ಸಂದೇಶ ಸಮುದಾಯಕ್ಕೆ ತಲುಪಲಿ

ಪ್ರತಿಯೊಂದು ಸಮಾಜದ ಮಹಾನ್‌ ಪುರುಷರ ಜಯಂತಿ ಆಚರಿಸುವ ಮೂಲಕ ಅವರ ಸಂದೇಶಗಳನ್ನು ಸಮುದಾಯಗಳಿಗೆ ತಲುಪಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಶಾಸಕ ಡಿಎಸ್‌ಸುರೇಶ್‌ ಹೇಳಿದರು...

Vijaya Karnataka 22 Jan 2019, 9:43 pm
ತರೀಕೆರೆ: ಪ್ರತಿಯೊಂದು ಸಮಾಜದ ಮಹಾನ್‌ ಪುರುಷರ ಜಯಂತಿ ಆಚರಿಸುವ ಮೂಲಕ ಅವರ ಸಂದೇಶಗಳನ್ನು ಸಮುದಾಯಗಳಿಗೆ ತಲುಪಿಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಶಾಸಕ ಡಿ.ಎಸ್‌.ಸುರೇಶ್‌ ಹೇಳಿದರು.
Vijaya Karnataka Web CKM-21TKR1


ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ಸೋಮವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಆಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಚೌಡಯ್ಯನವರು ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ್ದಾರೆ. ಅಂಬಿಗರ ಚೌಡಯ್ಯನವರು ಬಸವಣ್ಣನವರ ಸಮಕಾಲೀನರಾಗಿದ್ದು, ಅನುಭವ ಮಂಟಪದಲ್ಲಿ ಶ್ರೇಷ್ಠ ವಚನಕಾರರಾಗಿದ್ದರು ಎಂದ ಅವರು, ಸರಕಾರದ ಸೌಲಭ್ಯಗಳನ್ನು ಗಂಗಾಮತಸ್ಥರ ಸಮಾಜ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದರು.

ತಾ.ಪಂ. ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್‌ ಮಾತನಾಡಿ, ಆಧುನಿಕತೆ ಬೆಳೆದಂತೆ ವಚನಗಳನ್ನು ಓದಿ ತಿಳಿದುಕೊಳ್ಳುವ ಮನಸ್ಥಿತಿ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಾಚಾರ್ಯ ಎಚ್‌.ಎಂ.ನಾಗರಾಜರಾವ್‌ ಕಲ್ಕಟ್ಟೆ ವಿಶೇಷ ಉಪನ್ಯಾಸ ನೀಡಿದರು. ತಹಸೀಲ್ದಾರ್‌ ಎನ್‌.ಟಿ.ಧರ್ಮೋಜಿರಾವ್‌, ತಾ.ಪಂ.ಉಪಾಧ್ಯಕ್ಷೆ ಮಂಜುಳಾ, ದೋರನಾಳು ಗ್ರಾ.ಪಂ. ಅಧ್ಯಕ್ಷೆ ರಾಜೇಶ್ವರಿ, ಎಂ.ಸಿ.ಹಳ್ಳಿ ಗ್ರಾ.ಪಂ. ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಆಶಾ, ಈರಪ್ಪ, ಗಂಗಾಮತಸ್ಥರ ಸಮಾಜದ ತಾಲೂಕು ಅಧ್ಯಕ್ಷ ಎಲ್‌.ಎನ್‌.ಪರಮೇಶ್‌, ಗೌರವಾಧ್ಯಕ್ಷ ಡಿ.ಎಚ್‌.ಅಣ್ಣಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌ಬಾಬು, ಮುಖಂಡರಾದ ಓಂಕಾರಪ್ಪ, , ಮಹೇಶ್‌, ಟಿ.ಎಸ್‌.ಮಂಜುನಾಥ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ