ಆ್ಯಪ್ನಗರ

ಸ್ಥಳೀಯ ಸಂಸ್ಥೆ ಚುನಾವಣೆ ಕಟ್ಟುನಿಟ್ಟಾಗಿ ನಿರ್ವಹಿಸಿ

ಜಿಲ್ಲೆಯ ಕಡೂರು, ಪುರಸಭೆ, ಮೂಡಿಗೆರೆ,ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜಪುರ ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಿಸಿದ್ದು, ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳು ಕಟ್ಟುನಿಟ್ಟಾಗಿ ತಮ್ಮ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಸೂಚಿಸಿದರು.

Vijaya Karnataka 4 May 2019, 5:00 am
ಚಿಕ್ಕಮಗಳೂರು : ಜಿಲ್ಲೆಯ ಕಡೂರು, ಪುರಸಭೆ, ಮೂಡಿಗೆರೆ,ಕೊಪ್ಪ, ಶೃಂಗೇರಿ ಹಾಗೂ ನರಸಿಂಹರಾಜಪುರ ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಿಸಿದ್ದು, ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳು ಕಟ್ಟುನಿಟ್ಟಾಗಿ ತಮ್ಮ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಸೂಚಿಸಿದರು.
Vijaya Karnataka Web CKM-3RUDRAP5


ಜಿಲ್ಲಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ನಡೆಯುವ ಚುನಾವಣೆಗೆ ಸಂಬಂಧ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮೇ.9 ರಂದು ಕಡೂರು ಪುರಸಭೆ, ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ ಪಟ್ಟಣ ಪಂಚಾಯಿತಿಗಳಿಗೆ ಅಧಿಸೂಚನೆ ಪ್ರಕಟವಾಗಲಿದೆ. ಚುನಾವಣೆ ನಡೆಯುವ ಆಯಾ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಓ ಮತ್ತು ಎಆರ್‌ಓ ಗಳ ಜವಾಬ್ದಾರಿಯು ಮಹತ್ವದ್ದಾಗಿದೆ. ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸಬೇಕು. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ಮಾತನಾಡಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೊದಲು ಬ್ಯಾಲೆಟ್‌ ಪೇಪರ್‌ನಲ್ಲಿ ನಡೆಯುತ್ತಿತ್ತು. ಈ ಬಾರಿ ವಿದ್ಯುನ್ಮಾನ ಮತ ಯಂತ್ರಗಳ ಮೂಲಕ ನಡೆಯಲಿದೆ. ಈ ಬಗ್ಗೆ ಆರ್‌ಓ ಹಾಗೂ ಎಆರ್‌ಓ ಅವರು ಮತದಾರರಲ್ಲಿ ಜಾಗೃತಿ ಮೂಡಿಸುವುದಲ್ಲದೆ ಚುನಾವಣಾ ಕರ್ತವ್ಯಕ್ಕೆ ಸ್ಥಳೀಯ ಅಧಿಕಾರಿಗಳನ್ನು ನೇಮಿಸದಂತೆ ಎಚ್ಚರ ವಹಿಸಬೇಕು ಎಂದರು.

ಒಂದು ವಾರ್ಡಿನ ಮತದಾರರು ಇನ್ನೊಂದು ವಾರ್ಡಿಗೆ ಹೋಗಿ ಮತ ಹಾಕದಂತೆ ಎಚ್ಚರ ವಹಿಸಬೇಕು. ಹೀಗಾಗಿ ಆಯಾ ವ್ಯಾಪ್ತಿಯ ಮುನ್ಸಿಪಲ್‌ ಬಿಲ್‌ ಕಲೆಕ್ಟರ್‌ಗಳನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಯುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಹಾಗೂ ಪೋಲಿಂಗ್‌ ಬೂತ್‌ಗಳನ್ನು ಆರ್‌ಓ ಮತ್ತು ಎಆರ್‌ಓ ಮಾಹಿತಿ ಪಡೆದು ಹೊಸ ಮತದಾರರ ಪಟ್ಟಿಯನ್ನು ಸಿದ್ಧತೆ ಮಾಡಿ ಅದನ್ನು ಪರಿಶೀಲಿಸಬೇಕು ಎಂದು ಹೇಳಿದರು.

ನಾಮಪತ್ರಗಳನ್ನು ಆರ್‌ಓ ಗಳು ಕೂಲಂಕಷವಾಗಿ ಪರಿಶೀಲಿಸಬೇಕು. ಅರೇಕಾಲಿಕ ನ್ಯಾಯಾಧೀಶರಂತೆ ಯಾವುದೇ ಪಕ್ಷ ಪಾತವಿಲ್ಲದೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದರು. ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಆರ್‌ಒ ಹಾಗೂ ಎಆರ್‌ಓ ಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ