ಆ್ಯಪ್ನಗರ

ಶ್ರೀಕೃಷ್ಣನ ತತ್ವಾದರ್ಶಗಳು ದಾರಿದೀಪವಾಗಲಿ

ಶ್ರೀಕೃಷ್ಣನ ಆರಾಧನೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಆರಾಧಿಸಬೇಕು. ಕೃಷ್ಣನ ಸಂದೇಶಗಳನ್ನು ತಮ್ಮ ಜೀವನದಲ್ಲಿಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದು ತಾ.ಪಂ. ಅಧ್ಯಕ್ಷ ಜಯಣ್ಣ ಹೇಳಿದರು.

Vijaya Karnataka 24 Aug 2019, 5:00 am
ಚಿಕ್ಕಮಗಳೂರು: ಶ್ರೀಕೃಷ್ಣನ ಆರಾಧನೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಆರಾಧಿಸಬೇಕು. ಕೃಷ್ಣನ ಸಂದೇಶಗಳನ್ನು ತಮ್ಮ ಜೀವನದಲ್ಲಿಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದು ತಾ.ಪಂ. ಅಧ್ಯಕ್ಷ ಜಯಣ್ಣ ಹೇಳಿದರು.
Vijaya Karnataka Web may lord krishnas philosophies lead the way
ಶ್ರೀಕೃಷ್ಣನ ತತ್ವಾದರ್ಶಗಳು ದಾರಿದೀಪವಾಗಲಿ


ನಗರದ ಕುವೆಂಪು ಕಲಾ ಮಂದಿರದಲ್ಲಿಜಿಲ್ಲಾಡಳಿತ ಶುಕ್ರವಾರ ಏರ್ಪಡಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿನೆರೆ ಹಾವಳಿ ಸಂಭವಿಸಿರುವುದರಿಂದ ಶ್ರೀಕೃಷ್ಣ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀಕೃಷ್ಣ ಹಾಕಿಕೊಟ್ಟ ತತ್ವ, ಆದರ್ಶ, ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿಅಳವಡಿಸಿಕೊಳ್ಳಬೇಕು ಎಂದರು.

ಶ್ರೀಕೃಷ್ಣನ ವ್ಯಕ್ತಿತ್ವವನ್ನು ಆಧ್ಯಾತ್ಮಿಕ ಮತ್ತು ಸಾಹಿತ್ಯಾತ್ಮಕ ದೃಷ್ಟಿಕೋನದಲ್ಲಿನೋಡಬೇಕಾಗಿದೆ. ಪ್ರಪಂಚದ ಎಲ್ಲದೇಶಗಳಲ್ಲೂಭಗವದ್ಗೀತೆಯನ್ನು ಅಧ್ಯಯನ ಮಾಡಲಾಗುತ್ತಿದೆ. ಅವರ ತತ್ವ, ಆದರ್ಶ ದಾರಿ ದೀಪವಾಗಬೇಕು ಜತೆಗೆ ಜೀವಂತವಾಗಿಸಬೇಕಾಗಿದೆ ಎಂದರು.

ಪ್ರಾಂಶುಪಾಲ ನಾಗರಾಜ್‌ ಕಲ್ಕಟ್ಟೆ ಶ್ರೀಕೃಷ್ಣನ ಕುರಿತು ಉಪನ್ಯಾಸ ನೀಡಿದರು.

ವಿವಿಧ ಸಮಾಜದ ಮುಖಂಡರು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್‌ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ